ನಂಜನಗೂಡು ಮತ್ತು ಗುಂಡ್ಲುಪೇಟೆಯಲ್ಲಿ ನಡೆಯುತ್ತಿರುವ ಉಪಚುನಾವಣೆ ನಿಷ್ಪಕ್ಷಪಾತವಾಗಿ ನಡೆಯಬೇಕಾದಲ್ಲಿ ಅರೆಮಿಲಿಟರಿ ಪಡೆ ಅಗತ್ಯ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಬಂದು ಉಪಚುನಾವಣೆ ಪ್ರಚಾರದಲ್ಲಿ ತೊಡಗಿದ ನಂತರ ಪೊಲೀಸರು ಕಾಂಗ್ರೆಸ್ ಪರವಾಗಿ ವರ್ತಿಸಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ ಎಂದು ಅಸಮಾದಾನ ವ್ಯಕ್ತಪಡಿಸಿದ್ದಾರೆ.
ಬೆಂಕಿಮಹಾದೇವ್ ನಿವಾಸದ ಮೇಲೆ ರೈಡ್ ಮಾಡಿದ ಪೊಲೀಸರು ಶೂ ಹಾಕಿಕೊಂಡು ಮನೆಯೊಳಗೆ ಸರ್ಚ್ ಮಾಡಿದ್ದಾರೆ. ರಾತ್ರಿ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭಾಷಣಕ್ಕೂ ತೊಂದರೆ ಮಾಡಿದ್ದಾರೆ ಎಂದು ಆರೋಪಿಸಿದರು.
ಉಪಚುನಾವಣೆಯಲ್ಲಿ ಪೊಲೀಸರು ರಾಜ್ಯ ಸರಕಾರಕ್ಕೆ ಸಾಥ್ ನೀಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಅಣತಿಯಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಗುಡುಗಿದರು.
ವಿಧಾನಪರಿಷತ್ ಸದಸ್ಯ ವೀರಣ್ಣ ಮತ್ತಿಕಟ್ಟಿ ಅಳಿಯನ ಬಂಧನ ಪ್ರಕರಣವನ್ನು ಉಲ್ಲೇಖಿಸಿದ ಅವರು, ಕಾಂಗ್ರೆಸ್‌ನವರು ಬ್ಲಾಕ್ ಆಂಡ್ ವೈಟ್ ಧಂಧೆಯಲ್ಲಿ ತೊಡಗಿದ್ದಾರೆ ಎಂದು ನಾವು ಸದಾ ಹೇಳುತ್ತಿರುವುದಾಗಿ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.