Publish Date: Fri, 01 Jul 2022 (20:41 IST)
Updated Date: Fri, 01 Jul 2022 (20:45 IST)
ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ವ್ಯಕ್ತಿ ಕಾಡಾನೆ ದಾಳಿ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಆ ವ್ಯಕ್ತಿ ಪ್ರಾಣಾಪಾಯದಿಂದ ತಪ್ಪಿಸಿಕೊಂಡಿದ್ದಾರೆ. ಮೂಡಿಗೆರೆಯ MISLನಲ್ಲಿ ಕೆಲಸ ಮಾಡುತ್ತಿದ್ದ ಸತ್ತಿಗನಹಳ್ಳಿ ಗ್ರಾಮದ ಪ್ರಭಾಕರ್ ರಾತ್ರಿ ಕೆಲಸ ಮುಗಿಸಿ 9 ಗಂಟೆಗೆ ಬೈಕಿನಲ್ಲಿ ಹಿಂದಿರುಗುವಾಗ ಕಾಡಾನೆ ದಾಳಿ ಮಾಡಿದೆ. ಪ್ರಭಾಕರ್ ಕೂಡಲೇ ಬೈಕನ್ನ ಅಲ್ಲೇ ಬಿಟ್ಟು ಓಡಿ ಹೋಗಿ ಸಾವಿನಿಂದ ಪಾರಾಗಿದ್ದಾರೆ. ಆನೆ ದಾಳಿಯಿಂದ ಬೈಕ್ ಸಂಪೂರ್ಣ ಜಖಂಗೊಂಡಿದೆ. ಆನೆ ದಾಳಿಯಿಂದ ಪ್ರಭಾಕರ್ ಕಾಲು, ತಲೆಗೆ ತೀವ್ರ ಪೆಟ್ಟಾಗಿದ್ದು ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ರವಾನಿಸಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪ್ರಭಾಕರ್ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಅರಣ್ಯ ಅಧಿಕಾರಿಗಳು ಆನೆ ದಾಳಿ ಮಾಡಿದ ಸ್ಥಳಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರು ಅರಣ್ಯ ಇಲಾಖೆ ಕೂಡಲೇ ಆನೆಯನ್ನ ಸೆರೆ ಹಿಡಿದು ಸ್ಥಳಾಂತರಿಸಬೇಕೆಂದು ಆಗ್ರಹಿಸಿದ್ದಾರೆ.
geetha
Publish Date: Fri, 01 Jul 2022 (20:41 IST)
Updated Date: Fri, 01 Jul 2022 (20:45 IST)