Webdunia - Bharat's app for daily news and videos

Install App

ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿ

Webdunia
ಶುಕ್ರವಾರ, 16 ಜೂನ್ 2023 (14:51 IST)
ಮುಂಗಾರು ವೈಫಲ್ಯದ ಬಗ್ಗೆ ತೀರ್ಮಾನ ಬದಲು ಸಂಪುಟ ಸಭೆಯಲ್ಲಿ ದ್ವೇಷದ ತೀರ್ಮಾನ ಮಾಡಿದ್ದಾರೆಂದು  ಸರಣಿ ಟ್ವಿಟ್ ಮೂಲಕ ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
 
ರಾಜ್ಯದಲ್ಲಿ ‌ಮುಂಗಾರು ವೈಫಲ್ಯವಾಗಿದೆ.ಇದರಿಂದ ಹಲವಾರು ಗ್ರಾಮದಲ್ಲಿ ಕುಡಿಯುವ ನಿರಿನ ಹಾಹಾಕಾರ ಉಂಟಾಗಿದೆ ಅಂತರ ಜಲ ಕುಸಿದಿದೆ. ರೈತರ ಪಾಲಿಗೆ ಮುಂಗಾರು ವೈಫಲ್ಯ ಬಹಳ ದೊಡ್ಡ ಹೊಡೆತ ಕೊಟ್ಟಿದೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುವ ಬದಲು, ದ್ವೇಷದ ತೀರ್ಮಾನಗಳನ್ನು ತೆಗೆದುಕೊಂಡು,ಸಂಕಷ್ಟದಲ್ಲಿರುವ ಕರ್ನಾಟಕದ ಜನರಿಗೆ ಈ ಸರ್ಕಾರ ಶಾಪವಾಗಿದೆ.  ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದ್ವೇಷದ ಹಾಗೂ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ.ಹಿಂದಿನ ಸರ್ಕಾರದ ತೀರ್ಮಾನಗಳನ್ನು ರದ್ದು ಮಾಡುವುದನ್ನೇ ತನ್ನ ಸಾಧನೆ ಎನ್ನುವಂತೆ ನಡೆದುಕೊಳ್ಳುತ್ತಿದೆ.
 
ಸಮಾಜಕ್ಕೆ ಮಾರಕವಾಗಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ರದ್ದು ಮಾಡುವ ತೀರ್ಮಾನ ತೆಗೆದುಕೊಂಡು ಯಾರ ಓಲೈಕೆ ಮಾಡುತ್ತಿದೆ.ಹೈಕಮಾಂಡ್ ಹಂಗಿನಲ್ಲಿ ಸಿದ್ದರಾಮಯ್ಯ ಅಧಿಕಾರ ನಡೆಸುತ್ತಿದ್ದಾರೆ.ರಾಜ್ಯದ ಜನರ ಹಿತಾಸಕ್ತಿಗಿಂತ ಹೈಕಮಾಂಡ್ ಓಲೈಕೆಗೆ ಆದ್ಯತೆ ನೀಡುತ್ತಿರುವಂತಿದೆ. ಪಠ್ಯ ಪುಸ್ತಕವನ್ನೂ ಪರಿಷ್ಕರಣೆಯ ಹೆಸರಲ್ಲಿ ರಾಷ್ಟ್ರ ಭಕ್ತ ಸಂಘಟನೆ ಸ್ಥಾಪಿಸಿ, ಎಲ್ಲರಲ್ಲೂ ದೇಶಭಕ್ತಿ ಬೆಳೆಯಲು ಕಾರಣವಾಗುವಂತಹ ಆರ್ ಎಸ್ ಎಸ್ ಸಂಘಟನೆ ಸ್ಥಾಪಿಸಿರುವ ಡಾ. ಕೇಶವ ಬಲರಾಮ್ ಹೆಡಗೇವಾರ ಹಾಗೂ ವೀರ ಸಾವರ್ಕರ್ ಅವರ ಕುರಿತ ಪಠ್ಯವನ್ನು ತೆಗೆದು ಹಾಕಲು ತೀರ್ಮಾನ ತೆಗೆದುಕೊಂಡಿರುವುದು ದೇಶದ್ರೋಹಕ್ಕೆ ಸಮಾನ ಎಂದು ಬಸವರಾಜ್ ಬೊಮ್ಮಾಯಿ‌ ಕಿಡಿಕಾರಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments