Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮೈಸೂರು : ಮಡಿಕೇರಿ ಚಲೋ ಕೈ ಬಿಟ್ಟ ಕಾಂಗ್ರೆಸ್ ನಿಲುವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ವಾಗತಿಸಿದ್ದಾರೆ.
ನಗರದಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಬಿಎಸ್ವೈ, ಶಾಂತಿ ವಾತಾವರಣ ಇದ್ದಾಗ ಎಷ್ಟು ಜನರನ್ನಾದರೂ ಸೇರಿಸಿ. ಶಾಂತಿ ಸುವ್ಯವಸ್ಥೆ ದೃಷ್ಟಿಯಿಂದ ಈ ನಿರ್ಧಾರ ಸ್ವಾಗತಾರ್ಹ. ಬಿಜೆಪಿ ಕಾರ್ಯಕರ್ತರು ಕೂಡ ಯಾವುದೇ ಕಾರ್ಯಕ್ರಮ ಮಾಡಬಾರದು ಎಂದು ಅವರು ಹೇಳಿದರು.
ಸಿದ್ದರಾಮಯ್ಯ ಮೊಟ್ಟೆ ಎಸೆತ ಪ್ರಕರಣವನ್ನು ನೆಪ ಮಾಡಿಕೊಂಡು ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ಮೊಟ್ಟೆಯನ್ನು ಯಾರೇ ಎಸೆದಿದ್ದರೂ ಅದು ತಪ್ಪೇ. ಆದರೆ ಅದನ್ನೇ ನೆಪ ಮಾಡಿಕೊಂಡು ಪಾದಯಾತ್ರೆ ಹಮ್ಮಿಕೊಂಡಿದ್ದು ಕೂಡ ತಪ್ಪು ಎಂದರು.
ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರ ಅಲ್ಲ ಎಂದು ಸಿದ್ದರಾಮಯ್ಯ ಟೀಕಿಸುತ್ತಿರುವುದು ಸರಿಯಲ್ಲ. ಯಾರಿಗೆ ಧರ್ಮ, ದೇಶದ ಪರಿಕಲ್ಪನೆ ಇರುವುದಿಲ್ಲವೋ ಅಂತಹವರು ಈ ರೀತಿ ಬೇಜವಾಬ್ದಾರಿತನದಿಂದ ಮಾತಾಡ್ತಾರೆ. ಸಾವರ್ಕರ್ ಕುರಿತು ಸಿದ್ದರಾಮಯ್ಯ ನೀಡುತ್ತಿರುವ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.