Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಟ್ವೀಟರ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ

ಟ್ವೀಟರ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ
bangalore , ಬುಧವಾರ, 28 ಜೂನ್ 2023 (14:41 IST)
ಒಂದೇ ಹುದ್ದೆಗೆ ನಾಲ್ವರ ಅಧಿಕಾರಗಳ ವರ್ಗಾವಣೆಗೆ ಶಿಫಾರಸ್ಸು ವಿಚಾರವಾಗಿ ಟ್ವೀಟರ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
 
ಪಂಚಗ್ಯಾರಂಟಿಗಳ ಕಾಂಗ್ರೆಸ್  ಸರ್ಕಾರ, ಈಗ 6ನೇ ಗ್ಯಾರಂಟಿಯನ್ನೂ ಖಾತ್ರಿಗೊಳಿಸಿದೆ.ಅದು; ʼಕಾಸಿಗಾಗಿ ಪೋಸ್ಟಿಂಗ್!!ʼಅಧಿಕಾರಕ್ಕೆ ಬಂದು ತಿಂಗಳು ಮುಗಿಯುತ್ತಿದ್ದಂತೆಯೇ ,ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಈ ಸರ್ಕಾರ ಎಗ್ಗಿಲ್ಲದೆ ಉರುಳಾಡುತ್ತಿದೆ ಎನ್ನುವುದಕ್ಕೆ ಈ ವರದಿಯೇ ಸಾಕ್ಷಿಯಾಗಿದೆ.ಸ್ವತಃ ಮುಖ್ಯಮಂತ್ರಿ ಕಚೇರಿಯಲ್ಲೇ ವರ್ಗಾವರ್ಗಿ ದಂಧೆಗೆ ʼಹುಂಡಿʼ ಇದೆ ಎನ್ನುವುದು ಇಲ್ಲಿ ದಾಖಲೆ ಸಮೇತ ಬಟಾಬಯಲಾಗಿದೆ.ಒಂದೇ ಹುದ್ದೆಗೆ ಸ್ವತಃ ಮುಖ್ಯಮಂತ್ರಿ ಅವರೇ ನಾಲ್ವರಿಗೆ ಶಿಫಾರಸು ಪತ್ರ ಕೊಟ್ಟಿದ್ದಾರೆ!! ಸಿಎಂ ಕಚೇರಿಯಲ್ಲಿ ಏನೇನು ನಡೆಯುತ್ತಿದೆ? CMO ಅಂದರೆ @CMofKarnataka ವೋ ಅಥವಾ Corruption of Karnataka ವೋ?? 4 ಶಿಫಾರಸುಗಳ ಹಿಂದಿರುವ ಆ ʼಅತೀಂದ್ರʼ ಶಕ್ತಿ (!?) ಯಾವುದು ?ಮೂರೊಪ್ಪತ್ತೂ ಶಿಫಾರಸು ಪತ್ರಗಳನ್ನು ಟೈಪಿಸಿ, ಸಿಎಂ ಸಾಹೇಬರ ಸಹಿ ಮಾಡಿಸುವುದರಲ್ಲಿಯೇ ಅಧಿಕಾರಿಗಳು ತಲ್ಲೀನರಾಗಿದ್ದಾರೆನ್ನುವುದು ಖಾತ್ರಿ.ವರ್ಗಾವಣೆಯ ಪೇಮೆಂಟ್‌ ಕೋಟಾ ನಿಯಂತ್ರಣ ಮಾಡುತ್ತಿರುವ ಆ ʼರಿಮೋಟ್‌ ಕಂಟ್ರೋಲ್‌ʼ ಬಗ್ಗೆ ಜನಕ್ಕೆ ಅರ್ಥವಾಗುತ್ತಿದೆ.ಈ ಕಾಂಡದ ಸರ್ಕಾರ ಬಂದ ಮೊದಲ ದಿನದಿಂದಲೇ ʼಕಾಸಿಗಾಗಿ ಪೋಸ್ಟಿಂಗ್‌ʼ ದಂಧೆ ಶುರುವಾಗಿದೆ
 
 ಸರ್ಕಾರ ಕೆಲಸ ದೇವರ ಕೆಲಸʼ ಎನ್ನುವುದರ ಬದಲು ಬಂದಿದ್ದನ್ನು ಬಿಡದೇ ಬಾಚಿಕೋ ಎಂಬುದು ಈ ಸರ್ಕಾರ ಧ್ಯೇಯನೀತಿ ಆಗಿದೆ.ಜನರ ಹಣೆಗೆ ಗ್ಯಾರಂಟಿ ತುಪ್ಪ ಸವರಿ, ಬಿಟ್ಟಿಭಾಗ್ಯದ ಬೆಲ್ಲದ ಆಮಿಷವೊಡ್ಡಿ.ಲೂಟಿಪರ್ವಕ್ಕೆ ʼಹುಂಡಿʼ ಇಡಲಾಗಿದೆ.ಸಿಎಂ ಸಿದ್ದು,ಯತೀಂದ್ರ ವಿರುದ್ಧ ವಾಸಾಕ್ಷಿಯಾಗಿದೆ ಎಂದು‌ ಮಾಜಿ‌ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಾರಿಗೆ ಇಲಾಖೆ ನೌಕರರಿಗೆ ಸರಿಯಾದ ಸಮಯಕ್ಕೆ ಸಂಬಳ ಕೊಡ್ತೀವಿ : ರಾಮಲಿಂಗಾರೆಡ್ಡಿ