Webdunia - Bharat's app for daily news and videos

Install App

ಇಂದು ಬಿಜೆಪಿ ದಲಿತ ಸಮಾವೇಶ; ಮಾಜಿ ಐಎಎಸ್ ಕೆ. ಶಿವರಾಮ್ ಸೇರ್ಪಡೆ

Webdunia
ಶುಕ್ರವಾರ, 14 ಅಕ್ಟೋಬರ್ 2016 (12:47 IST)
ವಿಧಾನಸಭಾ ಚುನಾವಣೆಗೆ ಇನ್ನೂ ಒಂದೂವರೆ ವರ್ಷಗಳು ಬಾಕಿ ಇರುವಾಗಲೇ ಪ್ರಮುಖ ಪಕ್ಷಗಳು ಈಗಿನಿಂದಲೇ ಚುನಾವಣೆಗೆ ಸಿದ್ಧಗೊಳ್ಳುತ್ತಿವೆ. ಶತಾಯಗತಾಯ ಈ ಬಾರಿ ರಾಜ್ಯದಲ್ಲಿ ಅಧಿಕಾರವನ್ನು ಪಡೆಯಲೇಬೇಕೆಂದು ಹೊರಟಿರುವ, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಭಾರತೀಯ ಜನತಾ ಪಕ್ಷ ಅದಕ್ಕಾಗಿ ಭರ್ಜರಿ ತಯಾರಿ ನಡೆಸಿದ್ದು ಮುನಿಸಿಕೊಂಡಿುರುವ ದಲಿತ ಸಮುದಾಯದ ಓಲೈಕೆಗೆ ಮಾಸ್ಟರ್ ಪ್ಲಾನ್ ಮಾಡಿದೆ. ಪಕ್ಷದಲ್ಲಿ ದಲಿತ ನಾಯಕರನ್ನು ಬೆಳೆಸುವ ಯತ್ನ ನಡೆಸಲಾಗುತ್ತಿದೆ. 

ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಬಸವನಗುಡಿ ಮೈದಾನದಲ್ಲಿ  ಬೃಹತ್ ದಲಿತ ಸಮಾವೇಶನ್ನು ಹಮ್ಮಿಕೊಳ್ಳಲಾಗಿದ್ದು, ವಿಶೇಷವೆಂದರೆ ಮಾಜಿ ಐಎಎಸ್ ಅಧಿಕಾರಿ, ಸಿನಿಮಾ ನಟ ಕೆ. ಶಿವರಾಮು ಕಮಲ ಪಾಳಯಕ್ಕೆ ಅಧಿಕೃತವಾಗಿ ಸೇರ್ಪಡೆಯಾಗುತ್ತಿದ್ದಾರೆ. 
 
ಇನ್ನೊಂದೆಡೆ ಕೈ ಹಿರಿಯ ನಾಯಕ, ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದು ವಿರುದ್ಧ ಸಂಬಂಧವನ್ನು ಕೆಡಿಸಿಕೊಂಡಿರುವ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಹವಣಿಸುತ್ತಿರುವ ಬಿಜೆಪಿ, ಅವರಿಗೂ ಗಾಳ ಹಾಕುತ್ತಿದೆ. ಜೆಡಿಎಸ್ ಕೂಡ ಅವರನ್ನು ಸೆಳೆದುಕೊಳ್ಳಲು ಸರ್ವ ಪ್ರಯತ್ನಗಳನ್ನು ನಡೆಸಿದೆ.
 
ಪ್ರಸಾದ್ ತೆನೆ ಹೊರುತ್ತಾರೋ ಅಥವಾ ಕಮಲವನ್ನು ಮುಡಿಗೇರಿಸಿಕೊಳ್ಳುತ್ತಾರೋ ಅಥವಾ ಬೇರೆ ಯಾವ ನಿರ್ಧಾರವನ್ನು ಕೈಗೊಳ್ಳುತ್ತಾರೋ ಎಂಬುದನ್ನು ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments