Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ (Former CM Siddaramaiah) ಮತ್ತು ಕಾಂಗ್ರೆಸ್ ಮುಖಂಡ ಅನಿಲ್ ಲಾಡ್ (Congress leader Anil Lad) ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ (High grounds police station in Bengaluru) ರಾಜ್ಯ ಬಿಜೆಪಿ (BJP) ನಾಯಕರು ದೂರು ದಾಖಲಿಸಿದ್ದಾರೆ.
ಮಾಜಿ ರಾಜ್ಯಸಭಾ ಸದಸ್ಯ ಅನಿಲ್ ಲಾಡ್ ಅವರು, ಸಂವಿಧಾನ ರಚನೆ ಮಾಡಿದ್ದು ಇಂದಿರಾ ಗಾಂಧಿ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಎಂದು ಸಾಮಾಜಿಕ ಜಾಲತಾಣದಲ್ಲಿ ನೀಡಿರುವ ಹೇಳಿಕೆ ಮತ್ತು ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ ಎಂದು ಹೇಳಿಕೆ ನೀಡಿರುವ ವಿಚಾರ ಸಂಬಂಧ ಸಿದ್ಧರಾಮಯ್ಯ ಮತ್ತು ಅನಿಲ್ ಲಾಡ್ ವಿರುದ್ಧ ಬಿಜೆಪಿ ನಾಯಕರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ ಮತ್ತು ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.