ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಕಾಂಗ್ರೆಸ್ ಮಾಜಿ ಸಚಿವ ಎ ಮಂಜು ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು,’ ನನಗೆ ಈ ಸಮ್ಮಿಶ್ರ ಸರ್ಕಾರದಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಚುನಾವಣೆಗೆ ಸ್ಪರ್ಧಿಸಬೇಕೆಂಬ ಆಸೆ ಇದೆ. ಹೀಗಾಗಿ ಅವರೇ ಅಭ್ಯರ್ಥಿಯಾಗಬೇಕು ಎಂದು ಹೇಳಿದ್ದೇನೆ. ಇಲ್ಲ ಅಂದ್ರೆ ರಾಜಕಾರಣವೇನು ನಿಂತ ನೀರಲ್ಲ. ಬಳಿಕ ಆ ಯೋಚನೆ ಮಾಡುತ್ತೇನೆ’ ಎಂದು ಖಡಕ್ ಆಗಿ ಹೇಳಿದ್ದಾರೆ.
‘ಬಿಜೆಪಿ ನಾಯಕರ ಜೊತೆ ಮಾತಾಡಿದ್ದೇನೆ. ಹಾಸನದಲ್ಲಿ ದೋಸ್ತಿ ಅಭ್ಯರ್ಥಿ ಆಗಿ ದೇವೇಗೌಡರು ನಿಲ್ಲಲಿ ಎಂದು ಮನವಿ ಮಾಡಿಕೊಳ್ಳುತ್ತೇನೆ. ಒಂದು ವೇಳೆ ಪ್ರಜ್ವಲ್ ರೇವಣ್ಣ ನಿಂತ್ರೆ ನನ್ನ ಕಾರ್ಯಕರ್ತರ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇನೆ’ ಎಂದು ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.