Publish Date: Fri, 28 Aug 2020 (22:35 IST)
Updated Date: Fri, 28 Aug 2020 (22:37 IST)
ಮಾಜಿ ಸಚಿವ ಕೆಜೆ ಜಾರ್ಜ್ ಗೆ ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಕೇಸ್ ನಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ.
ಈ ಹಿಂದೆ ಮಂಗಳೂರಲ್ಲಿ ಡಿವೈಎಸ್ ಪಿ ಆಗಿದ್ದ ಗಣಪತಿ ಮಾಧ್ಯಮದ ಮುಂದೆ ಹೇಳಿಕೆ ನೀಡಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಪ್ರಕರಣ ಸಿಬಿಐಗೆ ವರ್ಗಾವಣೆಗೊಂಡು ಅದರಲ್ಲಿ ಬಿ ರಿಪೋರ್ಟ್ ಸಲ್ಲಿಕೆಯಾಗಿತ್ತು.
ಗಣಪತಿ ಅವರ ಪುತ್ರ ನೆಹಾಲ್ ನ್ಯಾಯ ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಇದೀಗ ಕೆಜೆ ಜಾರ್ಜ್ ಹಾಗೂ ಇತರ ಆರೋಪಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ.