Webdunia - Bharat's app for daily news and videos

Install App

ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ಎಂದ ಮಾಜಿ ಸಚಿವ

Webdunia
ಸೋಮವಾರ, 29 ಅಕ್ಟೋಬರ್ 2018 (15:46 IST)
ಜೆಡಿಎಸ್ ಅಭ್ಯರ್ಥಿ ಕಣದಲ್ಲಿರುವ ಕಡೆ ಬಿ ಎಸ್ ಪಿ ಬೆಂಬಲ ಸೂಚಿಸುತ್ತಿದೆ. ಪಕ್ಷದ ಕಾರ್ಯಚಟುವಟಿಕೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ನನ್ನ ಕ್ಷೇತ್ರದ ಜನರಿಗೆ ಹೆಚ್ಚು ಸಮಯ ನೀಡಲು ನಾನು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ಇದು ನನ್ನ ವಯಕ್ತಿಕ ನಿರ್ಧಾರ ಎಂದು ಮಾಜಿ ಸಚಿವ ಹೇಳಿದ್ದಾರೆ.

ಮಂಡ್ಯದಲ್ಲಿ ಮಾಜಿ ಸಚಿವ ಎನ್. ಮಹೇಶ್ ಸುದ್ದಿಗೋಷ್ಟಿಯಲ್ಲಿ ಮಾತನಾಡಿ,  ರಾಜೀನಾಮೆ ಕೊಡುವ ಸಂದರ್ಭದಲ್ಲಿ ಜೆಡಿಎಸ್ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡ್ತೀನಿ ಎಂದಿದ್ದೆ. ಹಾಗಾಗಿ ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡ್ತೀದ್ದೇನೆ. ಎಲ್. ಆರ್. ಶಿವರಾಮೇಗೌಡರಿಗೆ ಮತ ನೀಡಿ ಅವ್ರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡ್ತೀನಿ ಎಂದ್ರು.

ಈ ಸಮ್ಮಿಶ್ರ ಸರ್ಕಾರ ಅತ್ಯುತ್ತಮವಾಗಿ ಕೆಲಸ ಮಾಡ್ತಿದೆ. ನಾನು ಈ ಸರ್ಕಾರ ಕೆಲಸವನ್ನು ಬಹಳ ಹತ್ತಿರದಿಂದ ನೋಡಿದ್ದೇನೆ. ಈ ಸರ್ಕಾರ 5ವರ್ಷ ಉಳಿಬೇಕು. ಕುಮಾರಸ್ವಾಮಿ ಅವರದ್ದು ಜನಪರ ಆಡಳಿತ ನೀಡುವ ಸರಕಾರವಾಗಿದೆ. ಅಭಿವೃದ್ಧಿಯ ಕನಸು ಹೊತ್ತು ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾರೆ ಎಂದರು.

ಮಂಡ್ಯ ರಾಮನಗರದಲ್ಲಿ ಅತ್ಯಂತ ಹೆಚ್ಚು ಮತಗಳಿಂದ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಗೆಲ್ಲಲಿದ್ದಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments