Publish Date: Fri, 15 Apr 2022 (09:36 IST)
Updated Date: Fri, 15 Apr 2022 (09:39 IST)
ಚಿಕ್ಕಬಳ್ಳಾಪುರ : ಮಾಜಿ ಶಾಸಕ ಜಿ.ವಿ ಶ್ರೀರಾಮರೆಡ್ಡಿ ಇಂದು ನಿಧನರಾಗಿದ್ದಾರೆ.
ಬಾಗೇಪಲ್ಲಿ ಕ್ಷೇತ್ರದ ಮಾಜಿ ಶಾಸಕ ಜಿ ವಿ ಶ್ರೀರಾಮರೆಡ್ಡಿಯವರು ಸರ್ಕಾರಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಇವರು ಸಿಪಿಐಎಂ ಪಕ್ಷದಿಂದ ಶಾಸಕರಾಗಿದ್ದರು. ಸಿಪಿಐಎಂ ಪಕ್ಷದಿಂದ ಉಚ್ಛಾಟಿತರಾದ ನಂತರ ಪ್ರಜಾ ಸಂಘರ್ಷ ಸಮಿತಿ ಪಕ್ಷ ಸ್ಥಾಪನೆ ಮಾಡಿದ್ದರು. ಸದ್ಯ ಶ್ರೀರಾಮರೆಡ್ಡಿ ನಿಧನಕ್ಕೆ ಅಪಾರ ಪ್ರಮಾಣದ ಬೆಂಬಲಿಗರ ಸಂತಾಪ ಸೂಚಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಚಿವ ಸುಧಾಕರ್, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಜಿ.ವಿ.ಶ್ರೀರಾಮರೆಡ್ಡಿ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ.