ಬೆಳಗಾವಿ : ಮಹಾರಾಷ್ಟ್ರ ಏಕೀಕರಣ ಸಮಿತಿ ಸಂಘಟನೆಯ ಮುಖಂಡ ಹಾಗೂ ಮಾಜಿ ಶಾಸಕ ಸಂಭಾಜಿ ಪಾಟೀಲ್ ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇವರಿಗೆ 66 ವರ್ಷ ವಯಸ್ಸಾಗಿದ್ದು, ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ಸಂಭಾಜಿ ಪಾಟೀಲ್ ಹೃದಯಾಘಾತಕ್ಕೊಳಗಾದ ಕಾರಣ ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ 8:45ರ ಸುಮಾರಿನಲ್ಲಿ ಕೊನೆಯುಸಿರೆಳೆದಿದ್ದಾರೆ.
ಬೆಳಗಾವಿ ದಕ್ಷಿಣ ಕ್ಷೇತ್ರದಿಂದ ಒಮ್ಮೆ ಶಾಸಕರಾಗಿದ್ದ ಸಂಭಾಜಿ ಪಾಟೀಲ್ ಅವರು ಬೆಳಗಾವಿ ಮಹಾನಗರ ಪಾಲಿಕೆಗೆ ನಾಲ್ಕು ಬಾರಿ ಮೇಯರ್ ಆಗಿ ಕೆಲಸ ಮಾಡಿದ್ದರು. ಮಾಜಿ ಮುಖ್ಯಮಂತ್ರಿ ದಿ| ಎಸ್. ಬಂಗಾರಪ್ಪ ಅವರೊಂದಿಗೆ ಉತ್ತಮ ನಂಟು ಹೊಂದಿದ್ದ ಸಂಭಾಜಿ, ಅವರ ಮೂಲಕ ಹಿಡಕಲ್ ಜಲಾನಯನ ಯೋಜನೆಯಿಂದ ಬೆಳಗಾವಿ ಜನರ ನೀರಿನ ಸಮಸ್ಯೆಗೆ ಪರಿಹಾರ ಒದಗಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.