Publish Date: Tue, 07 Mar 2023 (13:38 IST)
Updated Date: Tue, 07 Mar 2023 (13:40 IST)
ಕಲಬುರಗಿ : ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಟಿಕೆಟ್ ಕುರಿತು ಕೊಟ್ಟ ಸುಳಿವಿನಿಂದ ಆಕಾಂಕ್ಷಿಗಳಿಗೆ ಶಾಕ್ ಆಗಿದೆ.
ನಾಲ್ಕೈದು ಶಾಸಕರಿಗೆ ಟಿಕೆಟ್ ಇಲ್ಲ ಎಂದು ಬಿಎಸ್ವೈ ಹೇಳಿದ್ದು, ಇದೀಗ ಬಿಜೆಪಿಯ ಆ ಟಿಕೆಟ್ ವಂಚಿತರು ಯಾರು ಎಂಬ ಪ್ರಶ್ನೆ ಕಾಡಿದೆ.
ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ, ಬಿಜೆಪಿ ಪಕ್ಷಕ್ಕೆ ಯಾರು ಬರುತ್ತಾರೆ ಅವರಿಗೆ ಸ್ವಾಗತ. ಯಾರು ಪಕ್ಷ ಬಿಟ್ಟು ಹೋಗ್ತಾರೆ ಅವರು ಬಿಟ್ಟು ಹೋಗಬಹುದು.
ನಾಲ್ಕೈದು ಹಾಲಿ ಶಾಸಕರನ್ನು ಬಿಟ್ಟು ಉಳಿದ ಎಲ್ಲಾ ಬಿಜೆಪಿ ಶಾಸಕರಿಗೆ ಟಿಕೆಟ್ ಕೊಡಲಾಗುವುದು. ಆದಷ್ಟು ಬೇಗ ಬಿಜೆಪಿ ಹುರಿಯಾಳುಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.