Select Your Language

Notifications

webdunia
webdunia
webdunia
webdunia

ಅಮೆರಿಕದಲ್ಲಿ ಸುಧಾಮೂರ್ತಿ ಹೆಸರು ಬಳಸಿ ವಂಚನೆ

ಇನ್ಫೋಸಿಸ್ ಪ್ರತಿಷ್ಠಾನ
ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸುಧಾಮೂರ್ತಿ ಅವರ ಹೆಸರನ್ನು ಬಳಸಿಕೊಂಡು ವಂಚನೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಸುಧಾಮೂರ್ತಿ ಅವರ ಪರ್ಸನಲ್ ಅಸಿಸ್ಟೆಂಟ್ ಮಮತ ಸಂಜಯ್ ಅವರು ಜಯನಗರ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದ್ದಾರೆ. ಶೃತಿ ಹಾಗೂ ಲಾವಣ್ಯ ಎಂಬುವವರ ವಿರುದ್ಧ ದೂರು ದಾಖಲಾಗಿದೆ. ಕೆಕೆಎನ್‌ಸಿ ಯಿಂದ 50ನೇ ವರ್ಷದ ಕಾರ್ಯಕ್ರಮಕ್ಕೆ ಸುಧಾಮೂರ್ತಿಯವರಿಗೆ ಆಹ್ವಾನಿಸಲಾಗಿತ್ತು. ಆದರೆ ಅವರು ಇಮೇಲ್ ಮೂಲಕ ಅಮೆರಿಕದಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಬರಲು ಆಗುವುದಿಲ್ಲ ಎಂದು ಸಂದೇಶ ಕಳುಹಿಸಿದ್ದರು. ಈ ನಡುವೆ ಸುಧಾಮೂರ್ತಿಯವರ ಫೋಟೋಗಳನ್ನು ಬಳಸಿಕೊಂಡು ಜಾಹೀರಾತುಗಳನ್ನು ನೀಡಲಾಗಿತ್ತು. ಇದನ್ನು ಪ್ರಶ್ನಿಸಿದಾಗ ವಂಚನೆ ಬೆಳಕಿಗೆ ಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಒಂದೇ ಹ್ಯಾಂಡ್ ರೈಟಿಂಗ್‌ನಲ್ಲಿ ಬೆದರಿಕೆ ಪತ್ರ..!