Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್, ಕಾಲೇಜುಗಳಿಗೆ ವೈಫೈ

ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್, ಕಾಲೇಜುಗಳಿಗೆ ವೈಫೈ
Bangalore , ಶುಕ್ರವಾರ, 13 ಜನವರಿ 2017 (14:04 IST)
ರಾಜ್ಯದಲ್ಲಿ ಉನ್ನತ ಶಿಕ್ಷಣವನ್ನು ಉತ್ತೇಜಿಸಲು ಮುಂದಿನ ಶೈಕ್ಷಣಿಕ ವರ್ಷದಿಂದ ಪರಿಶಿಷ್ಟ ಜಾತಿ/ಪಂಗಡದ ಮೊದಲ ವರ್ಷದ ಪದವಿ ಶಿಕ್ಷಣದ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‍ಟಾಪ್ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರು ತಿಳಿಸಿದ್ದಾರೆ.
 
ಬೆಂಗಳೂರು ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಸ್ವಾಮಿ ವಿವೇಕಾನಂದರ 154ನೇ ಜನ್ಮ ದಿನಾಚರಣೆ ಹಾಗೂ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಶೇ 94 ವಿದ್ಯಾರ್ಥಿಗಳು ಪ್ರಾಥಮಿಕ ಶಿಕ್ಷಣ ಪಡೆಯುತ್ತಿದ್ದು, ಪ್ರೌಢ ಶಿಕ್ಷಣಕ್ಕೆ ನೋಂದಾಯಿಸಿ ಕೊಳ್ಳುವಷ್ಟರಲ್ಲಿ ಅದು ಶೇ. 57 ಕ್ಕೆ ಇಳಿಯುತ್ತದೆ. 
 
ಪದವಿ ಶಿಕ್ಷಣಕ್ಕೆ ನೋಂದಾಯಿಸಿ ಕೊಳ್ಳುವುದು ಕೇವಲ ಶೇ 27 ಆಗಿದ್ದು, ಉನ್ನತ ಶಿಕ್ಷಣವನ್ನು ಉತ್ತೇಜಿಸಲು ಪರಿಶಿಷ್ಟ ಜಾತಿ/ಪಂಗಡ ವಿದ್ಯಾರ್ಥಿಗಳ ಜೊತೆಯಲ್ಲಿ ಮೂರು ಲಕ್ಷಕ್ಕಿಂತ ಕಡಿಮೆ ಆದಾಯದೊಳಗಿನ ಇತರೆ ಎಲ್ಲಾ ಜಾತಿಯ ವಿದ್ಯಾರ್ಥಿಗಳಿಗೆ ಸಹ ಲ್ಯಾಪ್‍ಟಾಪ್ ನೀಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಸಲ್ಲಿಸುವುದಾಗಿ ಹೇಳಿದರು.
 
ಕರ್ನಾಟಕದಲ್ಲಿ ಒಟ್ಟು 412 ಕಾಲೇಜುಗಳಿದ್ದು, ದಕ್ಷಿಣ ಕರ್ನಾಟಕದಲ್ಲಿ ಶೇ 50 ರಷ್ಟು ವಿದ್ಯಾರ್ಥಿಗಳು ಪದವಿ ಶಿಕ್ಷಣವನ್ನು ಪಡೆಯುತ್ತಿದ್ದು, ಇದಕ್ಕೆ ಹೋಲಿಸಿದಲ್ಲಿ ಉತ್ತರ ಕರ್ನಾಟಕ ಮತ್ತು ಹೈದರಾಬಾದ್-ಕರ್ನಾಟಕ ಕೇವಲ ಶೇ 10 ರಷ್ಟು ವಿದ್ಯಾರ್ಥಿಗಳು ಮಾತ್ರ ಪದವಿ ಶಿಕ್ಷಣ ಪಡೆಯುತ್ತಿರುವುದು ಕಳವಳಕಾರಿಯಾಗಿದೆ. ಕಲಬುರಗಿಯಲ್ಲಿ ಅತ್ಯಂತ ಕಡಿಮೆ ಶೇಕಡಾ 4 ರಷ್ಟು ಯುವಕರು ಮಾತ್ರ ಪದವಿ ಶಿಕ್ಷಣ ಪಡೆಯುತ್ತಿದ್ದಾರೆ ಹಾಗಾಗಿ ಉನ್ನತ ಶಿಕ್ಷಣದ ಗುಣಮಟ್ಟ ಸುಧಾರಿಸುವ ಜೊತೆಯಲ್ಲಿ ಉತ್ತೇಜನ ನೀಡಬೇಕಾದ ಜವಾಬ್ದಾರಿ ಇದೆ ಎಂದು ಸಚಿವರು ನುಡಿದರು.
 
ಕಾಲೇಜುಗಳಿಗೆ ವೈ-ಫೈ : ವಸತಿಸಹಿತ ಕಾಲೇಜುಗಳನ್ನು ಆರಂಭಿಸುವ ಮತ್ತು ಇರುವ ಕಾಲೇಜುಗಳಿಗೆ ವಸತಿ ನಿಲಯಗಳನ್ನು ನಿರ್ಮಿಸಲು ಸರ್ಕಾರ ಉದ್ದೇಶಿಸಿದೆ. ಈಗಾಗಲೇ 90 ಸರ್ಕಾರಿ ಕಾಲೇಜುಗಳಲ್ಲಿ ಉಚಿತ ವೈ-ಫೈ ಇಂಟರ್ ನೆಟ್‍ನ್ನು ಅಳವಡಿಸಲಾಗಿದ್ದು, ಮುಂದಿನ ವರ್ಷದೊಳಗೆ ರಾಜ್ಯದ 412 ಸರ್ಕಾರಿ ಕಾಲೇಜುಗಳಲ್ಲಿ ಉಚಿತ ವೈ-ಫೈ ಇಂಟರ್ ನೆಟ್‍ಅನ್ನು ಅಳವಡಿಸಲು ಉದ್ದೇಶಿಸಲಾಗಿದೆ ಎಂದು ಸಚಿವರು ಹೇಳಿದರು.
 
ಮುಂದಿನ ಶೈಕ್ಷಣಿಕ ವರ್ಷದಿಂದ ಬೆಂಗಳೂರಿನ ಮಹಾರಾಣಿ ಪದವಿ ಕಾಲೇಜು ಹಾಗೂ ಮಂಡ್ಯದ ಪ್ರಥಮ ದರ್ಜೆ ಸರ್ಕಾರಿ ಕಾಲೇಜನ್ನು ಸ್ವ್ವಾಯತ್ತ ವಿಶ್ವ ವಿದ್ಯಾಲಯಗಳಾಗಿ ಮಾರ್ಪಡಿಸುವ ಕಾರ್ಯ ಆರಂಭವಾಗಿದ್ದು ಈಗಾಗಲೇ ಈ ಎರಡೂ ಕಾಲೇಜುಗಳ ಅಭಿವೃದ್ಧಿಗಾಗಿ ತಲಾ 55 ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಈಶ್ವರಪ್ಪ ಯಾವಾಗ ರಾವಣರಾಗುತ್ತಾರೋ ಗೊತ್ತಿಲ್ಲ: ಬಿ.ಪಿ.ಮಂಜುನಾಥ್