Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಶುಕ್ರವಾರ ಮತ್ತು ಶನಿವಾರ ಹಿಂಗಾರು ಮಾರುತಗಳು ಪ್ರಬಲವಾಗಲಿದ್ದು, ಬೆಂಗಳೂರು ನಗರ ಸೇರಿದಂತೆ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ದಾವಣಗೆರೆ, ತುಮಕೂರು, ಹಾಸನ, ಚಿಕ್ಕಮಗಳೂರು ಹಾಗು ಚಿತ್ರದುರ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅ.30ಕ್ಕೆ ಈ ಜಿಲ್ಲೆಗಳ ಜೊತೆಗೆ ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕರ್ನಾಟಕದಲ್ಲಿ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.