ಬಿಜೆಪಿಯಿಂದ ಸುಮಲತಾ ಕಣಕ್ಕೆ?

Webdunia
ಶುಕ್ರವಾರ, 1 ಮಾರ್ಚ್ 2019 (20:08 IST)
ಮಹತ್ವದ ಬೆಳವಣಿಗೆಯೊಂದರಲ್ಲಿ ಸುಮಲತಾ ಅಂಬರೀಶ್ ಬಿಜೆಪಿಯಿಂದ ಕಣಕ್ಕೆ ಇಳಿಯಲಿದ್ದಾರೆ ಎಂಬ ಸುದ್ದಿ ಹರಿದಾಡಲಾರಂಭಿಸಿದೆ.

ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಕಣ್ಕಳಿಯುವುದಾಗಿ ಹೇಳಿರುವ ರೆಬಲ್ ಸ್ಟಾರ್ ಅಂಬರೀಶ್ ಅವರ ಪತ್ನಿ ಸುಮಲತಾ ಅವರಿಗೆ ಬಿಜೆಪಿ ಗಾಳ ಹಾಕಿದೆ. ಸುಮಲತಾ ಅಂಬರೀಶ್ ಅವರು ಕಾಂಗ್ರೆಸ್ ಪಕ್ಷದಿಂದ ಮಂಡ್ಯದಿಂದ ಕಣ್ಕಳಿಯಲು ಬಯಸಿದ್ದಾರೆ. ಆದರೆ ಇಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಯಾಗಿರುವ ಸಾಧ್ಯತೆಗಳು ನಿಚ್ಚಳವಾಗಿವೆ. ಸುಮಲತಾ ಅಂಬರೀಶ್ ಅವರಿಗೆ ಟಿಕೇಟ್ ಸಿಗುವ ಸಾಧ್ಯತೆಗಳು ಕಡಿಮೆಯಿದೆ. ಹಾಗಾಗಿ ಬಿಜೆಪಿ ಸುಮಲತಾ ಅವರನ್ನು ಸೆಳೆಯಲು ಪ್ರಯತ್ನ ನಡೆಸಿದೆ.

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಮೂಲಕ ಸುಮಲತಾ ಅಂಬರೀಶ್ ಅವರನ್ನು ಪಕ್ಷಕ್ಕೆ ಕರೆತರಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತಾ ಶಾ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ.

ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರಲು ಒಪ್ಪದೆ ಪಕ್ಷೇತರರಾಗಿ ಕಣ್ಕಳಿಯಲು ನಿರ್ಧರಿಸಿದರೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣ್ಕಳಿಸದೆ ಸುಮಲತಾ ಅವರನ್ನೇ ಬೆಂಬಲಿಸುವ ಸಾಧ್ಯತೆಗಳಿವೆ.
ಶತಾಯ-ಗತಾಯ ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ಅನ್ನು ಕಟ್ಟಿಹಾಕಲು ಬಿಜೆಪಿಯ ವರಿಷ್ಠರು ತೀರ್ಮಾನಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೇಡ ಕಂದಾ.... ವಿದ್ಯುತ್ ಸ್ಪರ್ಶಿಸಲು ಹೋದ ಮರಿಯನ್ನು ಕೋತಿ ಹೇಗೆ ರಕ್ಷಿಸಿತು ನೋಡಿ Video

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ನಿರೀಕ್ಷೆ

ಬಡವರನ್ನು ಯಾಮಾರಿಸ್ತೀರಾ, ಮಗು ಸಾವಿಗೆ ಕೇವಲ 2 ಲಕ್ಷನಾ..: ಕರ್ನಾಟಕ ಹೈಕೋರ್ಟ್ ಜಡ್ಜ್ ತೀರ್ಪಿಗೆ ನೆಟ್ಟಿಗರು ಫಿದಾ Video

ಮಾನನಷ್ಟ ಮೊಕದ್ದಮೆ ಕೇಸ್‌: ರಾಹುಲ್ ಗಾಂಧಿ ಕ್ಷಮೆಯಾಚನೆ

ಮುಂದಿನ ಸುದ್ದಿ
Show comments