Webdunia - Bharat's app for daily news and videos

Install App

ಇಂದಿನಿಂದ ಪ್ರತಿ ಮನೆಯಲ್ಲೂ ತಿರಂಗಾ ರಂಗು

Webdunia
ಶನಿವಾರ, 13 ಆಗಸ್ಟ್ 2022 (17:49 IST)
ಇನ್ನೆರಡು ದಿನಗಳಲ್ಲಿ ಭಾರತ ಸ್ವಾತಂತ್ರ್ಯಗೊಂಡು 75 ವರ್ಷಗಳು ತುಂಬುತ್ತವೆ. ಈ ನಿಟ್ಟಿನಲ್ಲಿ ದೇಶಾದ್ಯಂತ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸಲಾಗುತ್ತಿದ್ದು, ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಇದರ ಒಂದು ಭಾಗವಾಗಿ ಇಂದಿನಿಂದ ಆಗಸ್ಟ್ 15ರವರೆಗೆ ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜ ರಾರಾಜಿಸಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸರ್ಕಾರದ ಹರ್ ಘರ್ ತಿರಂಗಾ ಉಪಕ್ರಮದ ಭಾಗವಾಗಿ ಇಂದಿನಿಂದ ಆಗಸ್ಟ್ 15 ರವರೆಗೆ ಭಾರತೀಯರು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವಂತೆ ಮನವಿ ಮಾಡಿದ್ದರು. ಅದರಂತೆ ಇಂದಿನಿಂದ ಒಟ್ಟು ಮೂರು ದಿನಗಳ ಕಾಲ ಕೋಟ್ಯಾಂತರ ದೇಶವಾಸಿಗಳು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜನವನ್ನು ಹಾರಿಸಲಿದ್ದಾರೆ..ಭಾರತ ಸರ್ಕಾರದ ಹರ್ ಘರ್ ತಿರಂಗಾಕ್ಕಾಗಿ ಕೆಲಸ ಮಾಡುತ್ತಿರುವ ಕಂಪನಿ ಟ್ಯಾಗ್‌ಬಿನ್‌ ವೆಬ್​ಸೈಟ್​ ಅನ್ನು ಪ್ರಾರಂಭಿಸಿದೆ..ಈ ವೆಬ್​ಸೈಟ್ ಮೂಲಕ ಧ್ವಜದೊಂದಿಗೆ ಸೆಲ್ಫಿ ತೆಗೆದು ಅಪ್​ಲೋಡ್ ಮಾಡಬಹುದಾಗಿದೆ. ಈವರೆಗೆ ಲಕ್ಷಾಂತರ ಮಂದಿ ಧ್ವಜ ಹಾರಿಸಿ ಸ್ಥಳವನ್ನು ಪಿನ್ ಮಾಡಿದ್ದು, ಧ್ವಜದೊಂದಿಗೆ ಸೆಲ್ಫಿ ತೆಗೆದು ಫೋಟೋ ಅಪ್ ಲೋಡ್ ಮಾಡಿಕೊಂಡಿದ್ದಾರೆ. ಈ ವೆಬ್​ಸೈಟ್​ ಮೂಲಕ 5 ಕೋಟಿ ಪಿನ್‌ಗಳನ್ನು ತಲುಪುವ ಗುರಿ ಹೊಂದಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments