Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗೆ ಶಿಕ್ಷಣ ಇಲಾಖೆ ಚಿಂತನೆ

9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗೆ ಶಿಕ್ಷಣ ಇಲಾಖೆ ಚಿಂತನೆ
bangalore , ಗುರುವಾರ, 17 ಆಗಸ್ಟ್ 2023 (21:17 IST)
ಈಗಾಗಲೇ ರಾಜ್ಯ ಸರ್ಕಾರದಿಂದ ಬೋರ್ಡ್ ಪರೀಕ್ಷೆಯನ್ನು ಕೆಲ ತರಗತಿಗೆ ಪರಿಚಯಿಸಲಾಗಿತ್ತು. ಈಗ 9 ಮತ್ತು 11ನೇ ತರಗತಿಗೆ ಪರಿಚಯಿಸಲು ಚಿಂತನೆ ನಡೆಸಲಾಗಿದೆ.ಈ ಬಗ್ಗೆ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಚಿಂತನೆಯನ್ನು ನಡೆಸಲಾಗಿತ್ತು, 9 ಮತ್ತು 11ನೇ ತರಗತಿಗೆ ಇನ್ಮುಂದೆ ಬೋರ್ಡ್ ಪರೀಕ್ಷೆ ನಡೆಸೋದಕ್ಕೆ ಮುಂದಾಗಿದೆ .ಪರೀಕ್ಷೆಯಲ್ಲಿ ಕಾರ್ಯಕ್ಷಮತೆಯ ಆಧಾರ ಮೇಲೆ ವಿದ್ಯಾರ್ಥಿಗಳನ್ನು ಫೇಲ್ ಮಾಡದಂತೆ ನಿರ್ಧಾರ ಮಾಡಲಾಗಿದೆ.ಈಗಾಗಲೇ ಕೇರಳ ಮತ್ತು ಗುಜರಾತ್ ರಾಜ್ಯಗಳಲ್ಲಿ ಈ ಮಾದರಿಯಿದೆ. ಅದೇ ಮಾದರಿಯಲ್ಲಿ ಕರ್ನಾಟಕದ 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಯನ್ನು ಪರಿಚಯಿಸೋದಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮುಂದಾಗಿದೆ.ಪ್ರಸ್ತುತ ರಾಜ್ಯದಲ್ಲಿನ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿಗಳಿಗೆ ಬೋರ್ಡ್ ಪರೀಕ್ಷೆಯನ್ನು ನಡೆಸಲಾಗುತ್ತಿದೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಕಣ್ಣಮುಂದೆ ಪತ್ನಿ ಮೇಲೆ ಹರಿದ ಬಸ್ಸು