Publish Date: Thu, 01 Mar 2018 (06:52 IST)
Updated Date: Thu, 01 Mar 2018 (06:57 IST)
ಬೆಂಗಳೂರು: ಇಂದಿನಿಂದ ದ್ವಿತೀಯು ಪಿ.ಯು ಪರೀಕ್ಷೆ ಆರಂಭವಾಗಲಿದೆ. ಮೊದಲ ದಿನ ಅರ್ಥಶಾಸ್ತ್ರ ಮತ್ತು ಭೌತ ವಿಜ್ಞಾನ ವಿಷಯದ ಪರೀಕ್ಷೆಗಳು ನಡೆಯಲಿವೆ.
ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ. ಪರೀಕ್ಷೆ ಬೆಳಿಗ್ಗೆ 10.15ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ನಡೆಯಲಿದೆ.
ಪರೀಕ್ಷಾ ಅಕ್ರಮಗಳು ನಡೆಯದಂತೆ ಇಲಾಖೆಯು ಸೂಕ್ತ ಕ್ರಮಗಳನ್ನು ತೆಗೆದುಕೊಂಡಿದೆ. ಪರೀಕ್ಷಾ ಕೇಂದ್ರಗಳ ಸುತ್ತ ಬಿಗಿ ಪೊಲೀಸ್ ಭದ್ರತೆಗೆ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ