ಕೆಇಆರ್ಸಿ ಜಾರಿಗೊಳಿಸುವ ವಿದ್ಯುತ್ ದರ ಪರಿಷ್ಕರಣೆಗೂ ಮತ್ತು ಎಸ್ಕಾಂಗಳು ಜನರೇಟರ್ ಗಳಿಂದ ಖರೀದಿಸುವ ವಿದ್ಯುತ್ ಮೇಲಿನ ಇಂಧನ ವೆಚ್ಚದಲ್ಲಿನ ಬೆಲೆಯಲ್ಲಿ ವ್ಯತ್ಯಾಸ ಉಂಟಾಗುವುದಿರಂದ ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ ಶುಲ್ಕವನ್ನು ವಿಧಿಸಲು ಕೆಇಆರ್ ಸಿ ಎಸ್ಕಾಂಗಳಿಗೆ ಅನುಮತಿ ನೀಡುತ್ತದೆ.
ಕೇಂದ್ರ ಸರಕಾರ 2005ರ ವಿದ್ಯುಚ್ಚಕ್ತಿ ನಿಯಮಗಳಿಗೆ 2002ರ ಡಿಸೆಂಬರ್ 29 ರಂದು ತಿದ್ದುಪಡಿ ತಂದು ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚವನ್ನು ಸಮಯಕ್ಕೆ ಸರಿಯಾಗಿ ಸಂಗ್ರಹಿಸಲು ಸೂಚಿಸಿತ್ತು.
ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚವನ್ನು ಬೆಸ್ಕಾಂ ಗ್ರಾಹಕರಿಗೆ ಪ್ರತಿ ಯೂನಿಟ್ ಗೆ 59 ಪೈಸೆಯಷ್ಟು ವಿಧಿಸಲು ಕೆಇಆರ್ಸಿ ಅನುಮತಿ ನೀಡಿದ್ದು, ಈ ಮೊತ್ತವನ್ನು ಜೂನ್ ತಿಂಗಳಲ್ಲಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆ ಎಂದು ಬೆಸ್ಕಾಂ ಎಂಡಿ ತಿಳಿಸಿದ್ದಾರೆ.