ಇಂಧನ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಕುರಿತಂತೆ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಚಿಸಲಾದ ಸದನ ಸಮಿತಿ ಇಂದು ಸರಕಾರಕ್ಕೆ ವರದಿಯನ್ನು ಸಲ್ಲಿಸಿದೆ.
ಕಳೆದ 2004 ರಿಂದ 2014 ರವರೆಗೆ ಇಂಧನ ಇಲಾಖೆಯಲ್ಲಿ ನಡೆದ ಅವ್ಯವಹಾರಗಳ ಬಗ್ಗೆ ವಿಸ್ತ್ರತವಾದ ವರದಿ ಸಲ್ಲಿಸಿದ್ದಾರೆ. ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ಜಂಟಿ ಸದನ ಸಮಿತಿ ವರದಿಯಲ್ಲಿ ಬಹಿರಂಗಪಡಿಸಲಾಗಿದೆ.
ಮಾಜಿ ಇಂಧನ ಖಾತೆ ಸಚಿವೆ ಶೋಭಾ ಕರಂದ್ಲಾಜೆ ವಿದ್ಯುತ್ ಖರೀದಿಸುವ ನಿರ್ಧಾರದಿಂದ ಸರಕಾರದ ಬೊಕ್ಕಸಕ್ಕೆ 1590 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ವರದಿಯಲ್ಲಿ ತಿಳಿಸಿದೆ.
ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ಸರಕಾರ, ತನಿಖೆಗೆ ಆದೇಶಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.