Publish Date: Thu, 28 Sep 2023 (17:00 IST)
Updated Date: Thu, 28 Sep 2023 (16:19 IST)
ಇಂಧನ ಡಿಪೋದಲ್ಲಿ ಸಂಭವಿಸಿದ ಸ್ಫೋಟದಿಂದ 20 ಜನರು ಸಾವನ್ನಪ್ಪಿರುವ ಘಟನೆ ನಾಗೋರ್ನೊ-ಕರಾಬಖ್ನಲ್ಲಿ ನಡೆದಿದೆ. ಈ ದುರಂತದಲ್ಲಿ ನೂರಾರು ಜನರು ಗಾಯಗೊಂಡಿದ್ದಾರೆ. ಖಾನ್ಕೆಂಡಿಯ ಮುಖ್ಯ ನಗರದ ಬಳಿ ಸಂಜೆ ಸ್ಫೋಟ ಸಂಭವಿಸಿದೆ. ಸುಮಾರು 300 ಜನರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅವರಲ್ಲಿ ಅನೇಕರ ಸ್ಥಿತಿ ಗಂಭೀರವಾಗಿದೆ. ಸ್ಫೋಟಕ್ಕೆ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಸ್ಫೋಟದ ಸ್ಥಳದಲ್ಲಿ 13 ಅಪರಿಚಿತ ಶವಗಳು ಪತ್ತೆಯಾಗಿವೆ. ಏಳು ಮಂದಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಸುಟ್ಟಗಾಯಗಳಾಗಿರುವ 290 ರೋಗಿಗಳಿಗೆ ಆಸ್ಪತ್ರೆಯಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.