Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಇತರೆ ರಾಜ್ಯಗಳಿಗಿಂತ ರಾಜ್ಯದಲ್ಲಿ ಇಂಧನ ದರ ಕಡಿಮೆಯಿದೆ: ಬೆಲೆ ಏರಿಕೆಗೆ ಸಿಎಂ ಸಮರ್ಥನೆ

Siddaramaiah

Sampriya

ಬೆಂಗಳೂರು , ಭಾನುವಾರ, 16 ಜೂನ್ 2024 (17:26 IST)
ಬೆಂಗಳೂರು: ರಾಜ್ಯ ಸರ್ಕಾರ ಶನಿವಾರ ಪೆಟ್ರೋಲ್‌ ಮತ್ತು ಡಿಸೇಲ್‌ ಬೆಲೆಯಲ್ಲಿ 3 ರೂಪಾಯಿ ಹೆಚ್ಚಳ ಘೋಷಿಸಿತ್ತು. ಈ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

ಪೆಟ್ರೋಲ್ ಮೇಲಿನ ವ್ಯಾಟ್ ಅನ್ನು ಶೇಕಡ 29.84ರಷ್ಟು ಮತ್ತು ಡೀಸೆಲ್ ಮೇಲೆ ಶೇಕಡ 18.44ರಷ್ಟು ರಾಜ್ಯ ಸರ್ಕಾರ ಹೆಚ್ಚಿಸಿದೆ. ಈ ಹೆಚ್ಚಳದ ನಂತರವೂ, ಇಂಧನದ ಮೇಲಿನ ನಮ್ಮ ರಾಜ್ಯದ ತೆರಿಗೆಗಳು ದಕ್ಷಿಣ ಭಾರತದ ಹೆಚ್ಚಿನ ರಾಜ್ಯಗಳು ಮತ್ತು ಮಹಾರಾಷ್ಟ್ರದಂತಹ ಆರ್ಥಿಕ ಗಾತ್ರದ ರಾಜ್ಯಗಳಿಗಿಂತ ಕಡಿಮೆ ಇದೆ ಎಂದು ಎಕ್ಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.

ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಮೇಲಿನ ವ್ಯಾಟ್ ಶೇಕಡ 25ರಷ್ಟು ಮತ್ತು 5.12 ರೂ ಹೆಚ್ಚುವರಿ ತೆರಿಗೆ ಮತ್ತು ಡೀಸೆಲ್ ಮೇಲೆ ಶೇಕಡ 21ರಷ್ಟಿದೆ. ವ್ಯಾಟ್ ಹೆಚ್ಚಳದ ಹೊರತಾಗಿಯೂ, ಕರ್ನಾಟಕದಲ್ಲಿ ಡೀಸೆಲ್ ಬೆಲೆ ಗುಜರಾತ್ ಮತ್ತು ಮಧ್ಯಪ್ರದೇಶಕ್ಕಿಂತ ಕಡಿಮೆ ಇದೆ. ಆದರೆ ಇತ್ತೀಚಿನ ಏರಿಕೆಯ ನಂತರವೂ ಕರ್ನಾಟಕದ ಪರಿಷ್ಕೃತ ದರಗಳು ಇನ್ನೂ ಹೆಚ್ಚು ಕೈಗೆಟುಕುವ ದರದಲ್ಲಿವೆ ಎಂದು ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡರು.

ಹಿಂದಿನ ಬಿಜೆಪಿ ಸರ್ಕಾರ ಸತತವಾಗಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಇಳಿಸಿದರೆ, ಕೇಂದ್ರ ಸರ್ಕಾರವು ಏಕಕಾಲದಲ್ಲಿ ತೆರಿಗೆಗಳನ್ನು ಹೆಚ್ಚಿಸಿತು. ಇದರಿಂದಾಗಿ ಕರ್ನಾಟಕಕ್ಕೆ ಆದಾಯ ಕಡಿಮೆಯಾಗಿದೆ ಮತ್ತು ಕೇಂದ್ರ ಸರ್ಕಾರಕ್ಕೆ ಆದಾಯ ಹೆಚ್ಚಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅವರ ಪ್ರಕಾರ, ಈ ವಿಧಾನದಿಂದ ಕರ್ನಾಟಕದ ಜನರಿಗೆ ಅನ್ಯಾಯವಾಗಿದೆ ಎಂದರು.

ಹಿಂದಿನ ಬಿಜೆಪಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡುತ್ತಲೇ ಇತ್ತು. ಆದರೆ ಕೇಂದ್ರ ಸರ್ಕಾರವು ತನ್ನದೇ ಆದ ತೆರಿಗೆಯನ್ನು ಹೆಚ್ಚಿಸಿತು. ಈ ಕ್ರಮದಿಂದ ಕರ್ನಾಟಕಕ್ಕೆ ಆದಾಯವನ್ನು ಕಡಿಮೆ ಮಾಡಲು ಕಾರಣವಾಗಿತ್ತು. ಆದರೆ ಕೇಂದ್ರ ಸರ್ಕಾರದ ಬೊಕ್ಕಸ ತುಂಬಿತ್ತು ಎಂದು ಅವರು ಬರೆದುಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಗ್ಯಾರಂಟಿ ಯೋಜನೆಗೆ ಹಣ ಬೇಕಲ್ಲವೇ?: ಇಂಧನ ಬೆಲೆ ಏರಿಕೆಯನ್ನು ಸಮರ್ಥಿಸಿದ ಎಂ.ಬಿ.ಪಾಟೀಲ