ಬೆಂಗಳೂರು: ಒಂದೆಡೆ ದೇಶದಲ್ಲಿ ತೈಲ ಬೆಲೆ ದಾಖಲೆಯ ಏರಿಕೆ ಕಾಣುತ್ತಿದ್ದರೆ, ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಲು ಸಿಎಂ ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ.
ರಾಜ್ಯದಲ್ಲಿ ಬಜೆಟ್ ವೇಳೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿತ್ತು. ಈಗ ತೈಲದ ಮೇಲಿನ ತೆರಿಗೆ ಕಡಿತ ಮಾಡಿ ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ಗೆ 2 ರಿಂದ 3 ರೂ. ಇಳಿಕೆ ಮಾಡಲು ಸಿಎಂ ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ.
ಈ ಬಗ್ಗೆ ಆರ್ಥಿಕ, ವ್ಯವಹಾರ ತಜ್ಞರೊಂದಿಗೆ ಚರ್ಚೆ ನಡೆಸಿರುವ ಸಿಎಂ ಕುಮಾರಸ್ವಾಮಿ ನಾಳೆಯೇ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.