Publish Date: Fri, 13 Nov 2020 (07:49 IST)
Updated Date: Fri, 13 Nov 2020 (07:50 IST)
ಬೆಂಗಳೂರು : ಹಿರಿಯ ಪತ್ರಕರ್ತ, ಬರಹಗಾರ ರವಿ ಬೆಳಗೆರೆ (62) ಗುರುರಾತ್ರಿ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬೆಂಗಳೂರಿನ ಪ್ರಾರ್ಥನಾ ಶಾಲೆಯಲ್ಲಿ ಇಂದು ಬೆಳಿಗ್ಗೆ 9 ಗಂಟೆಗೆ ರವಿ ಬೆಳಗೆರೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು. ಸಂಜೆ 4 ಗಂಟೆಗೆ ರವಿ ಬೆಳಗೆರೆ ಅಂತ್ಯ ಸಂಸ್ಕಾರ ಕಾರ್ಯ ನೇರವೇರಲಿದೆ. ಬನಶಂಕರಿ ಚಿತಾಗಾರದಲ್ಲಿ ಅವರ ಅಂತ್ಯ ಸಂಸ್ಕಾರ ನಡೆಯಲಿರುವುದಾಗಿ ಅವರ ಪುತ್ರ ಕರ್ಣ ಹೇಳಿದ್ದಾರೆ.