ಕಾವೇರಿ ಜಲಾನಯನ ಪ್ರದೇಶದ ವಾಸ್ತವ ಸ್ಥಿತಿ ಅಧ್ಯಯನ ಮಾಡಲು ಕೇಂದ್ರದಿಂದ ಬಂದಿರುವ ತಾಂತ್ರಿಕ ತಜ್ಞರನ್ನು ಕಾವೇರಿ ಹಿತ ರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡ ಭೇಟಿ ಮಾಡಿ, ನ್ಯಾಯಲಯಲ್ಲಿ ಯಥಾವತ್ ವರದಿ ನೀಡುವಂತೆ ಮನವಿ ಮಾಡಿಕೊಂಡರು.
ಮಂಡ್ಯ ಜಿಲ್ಲೆಯ ಮದ್ದೂರಿನ ಪ್ರವಾಸಿ ಮಂದಿರದಲ್ಲಿ ಕೇಂದ್ರದಿಂದ ಆಗಮಿಸಿರು ತಾಂತ್ರಿಕ ತಂಡದ ಅಧಿಕಾರಿಗಳನ್ನು ಭೇಟಿ ಮಾಡಿದ ಜಿ.ಮಾದೇಗೌಡರು, ಕಾವೇರಿ ಜಲಾನಯನ ಪ್ರದೇಶದ ವಾಸ್ತವ ಸ್ಥಿತಿ ಕುರಿತು ಮನವರಿಕೆ ಮಾಡಿಕೊಟ್ಟರು.
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಕೇಂದ್ರದಿಂದ ತಾಂತ್ರಿಕ ತಜ್ಞರು ರಾಜ್ಯಕ್ಕೆ ಆಗಮಿಸಿದ್ದು, ಕಾವೇರಿ ಜಲಾನಯನ ಪ್ರದೇಶದ ವಾಸ್ತವ ಸ್ಥಿತಿ ಕುರಿತು ಪರಿಶೀಲನೆ ನಡೆಸಿದ್ದಾರೆ.
ಅಕ್ಟೋಬರ್ 4 ರಂದು ನಡೆದ ವಿಚಾರಣೆಯ ವೇಳೆ ಉಭಯ ರಾಜ್ಯಗಳ ವಾಸ್ತವ ಸ್ಥಿತಿಯನ್ನು ಪರಿಶೀಲನೆ ನಡೆಸುವಂತೆ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿ ಉದಯ್ ಲಲಿತ್ ನೇತೃತ್ವದ ದ್ವಿಸದಸ್ಯ ಪೀಠ ಆದೇಶ ಕೇಂದ್ರ ಸರಕಾರಕ್ಕೆ ಸೂಚನೆ ನೀಡಿತ್ತು.
ಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ