ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಹೋರಾಟಗಾರರ ಮೇಲಿನ ಕೇಸ್ಗಳನ್ನು ವಾಪಸ್ ಪಡೆಯುವಂತೆ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಮಾದೇಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರಲ್ಲಿ ಮನವಿ ಮಾಡಿಕೊಂಡರು.
ಜೆಡಿಎಸ್ ಪಕ್ಷದಿಂದ ಅಮಾನತ್ತುಗೊಂಡಿರುವ ಚೆಲುವರಾಯಸ್ವಾಮಿ ಅವರ ಮೊಬೈಲ್ನಿಂದ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಮಾದೇಗೌಡ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತನಾಡಿದರು. ಈ ವೇಳೆ ಮಾದೇಗೌಡರು ರೈತರ ಬೆಳೆ ನಷ್ಟಕ್ಕೆ ಪರಿಹಾರ ನೀಡುವಂತೆ ಸಿಎಂ ಅವರನ್ನು ಒತ್ತಾಯ ಮಾಡಿದರು.
ಕಾವೇರಿ ಹೋರಾಟಗಾರರ ಮೇಲಿನ ಪ್ರಕರಣ ಹಾಗೂ ಕಾವೇರಿ ಜಲಾನಯನ ಪ್ರದೇಶದ ರೈತರ ಬೆಳೆಗೆ ಪರಿಹಾರ ನೀಡುವ ಕುರಿತು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯನವರು ಮಾದೇಗೌಡರಿಗೆ ಭರವಸೆ ನೀಡಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ