ನಿನ್ನೆ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಗೈರುಹಾಜರಾಗಿದ್ದ ಕೆಪಿಸಿಸಿ ಅಧ್ಯಕ್ಷ ಜಿ.,ಪರಮೇಶ್ವರ್ ಅವರಿಗೆ ಯಾವುದೇ ಅಸಮಾಧಾನವಿಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಇಂದು ಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ, ಮಾಜಿ ಗೃಹಸಚಿವ ಜಿ.ಪರಮೇಶ್ವರ್ ಅವರನ್ನು ನೂತನ ಗೃಹ ಸಚಿವ ರಾಮಲಿಂಗಾರೆಡ್ಡಿ ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೂರ್ವನಿಯೋಜಿತ ಕಾರ್ಯಕ್ರಮಗಳಿಂದಾಗಿ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬರಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಅವರಿಗೆ ಅಸಮಾಧಾನವಾಗಿದೆ. ಪರಮೇಶ್ವರ್ ಮತ್ತು ಸಿಎಂ ಸಿದ್ದರಾಮಯ್ಯ ಮಧ್ಯೆ ಭಿನ್ನಮತ ಸ್ಫೋಟಗೊಂಡಿದೆ ಎನ್ನುವ ವರದಿಗಳು ಸತ್ಯಕ್ಕೆ ದೂರವಾಗಿವೆ ಎಂದು ಹೇಳಿದ್ದಾರೆ.
ಪರಮೇಶ್ವರ್ ಅವರು ಗೃಹ ಇಲಾಖೆಯ ಕಾರ್ಯವೈಖರಿಗಳ ಬಗ್ಗೆ ಸಲಹೆ ನೀಡಿದ್ದಾರೆ. ಅವರ ಸಲಹೆಯಂತೆ ಖಾತೆಯನ್ನು ಯಶಸ್ವಿಯಾಗಿ ನಿಭಾಯಿಸುವ ವಿಶ್ವಾಸವಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.