'ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ಗೆ ಮಾನಮರ್ಯಾದೆ ಇದ್ಯಾ' ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ಖಾರವಾಗಿ ಪ್ರಶ್ನಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂಜನಗೂಡು ಉಪಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಯೇ ಇಲ್ಲ ಎಂದರೆ ಎನು ಅರ್ಥ?. ಒಂದು ಕಾಲದಲ್ಲಿ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧಿಸಿ ಗೆದ್ದವರು ಎಂದು ವಾಗ್ದಾಳಿ ನಡೆಸಿದರು.
ಕಳಲೆ ಕೇಶವಮೂರ್ತಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯೇ ಆಗಿಲ್ಲ. ಇಗಲೇ ನಂಜನಗೂಡು ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ಕಿಡಿಕಾರಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಂಡೆದ್ದ ಮಾಜಿ ಶಾಸಕ ಶ್ರೀನಿವಾಸ್ ಪ್ರಸಾದ್, ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷ ಸೇರಿದ್ದರಿಂದ ನಂಜನಗೂಡು ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ