ಕೆಪಿಸಿಸಿ ಹಾಲಿ ಅಧ್ಯಕ್ಷ ಜಿ.ಪರಮೇಶ್ವರ್ ಅವರನ್ನು ಮುಂದುವರಿಸುವ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಘೋಷಿಸಿದ ನಂತರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಚುನಾವಣೆ ವರ್ಷವಾದ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಅನಗತ್ಯ ಗೊಂದಲ ಉಂಟು ಮಾಡುವುದು ಬೇಡ ಹಿನ್ನೆಲೆಯಲ್ಲಿ, ಜಿ.ಪರಮೇಶ್ವರ್‌ಗೆ ಚುನಾವಣೆ ಮುಕ್ತಾಯವಾಗುವರೆಗೆ ಮುಂದುವರಿಸಲು ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾದ ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಆರ್.ಎಸ್.ಪಾಟೀಲ್, ಕೆ.ಎಚ್.ಮುನಿಯಪ್ಪ ಸೇರಿದಂತೆ ಇತರ ನಾಯಕರೊಂದಿಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಚರ್ಚೆ ನಡೆಸಿದರು ಎನ್ನಲಾಗಿದೆ.
ಇಂದು ಸಂಜೆ ರಾಹುಲ್ ಗಾಂಧಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿದ್ದು, ಸಭೆಯಲ್ಲಿ ಕೆಪಿಸಿಸಿ ನೂತನ ಅಧ್ಯಕ್ಷರ ನೇಮಕಾತಿ ಕುರಿತಂತೆ ತೆರೆಬೀಳಲಿದೆ ಎಂದು ಹೈಕಮಾಂಡ್ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.