Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಲೈಂಗಿಕ ದೌರ್ಜನ್ಯ: ಪರಮೇಶ್ವರ್ ರಾಜೀನಾಮೆಗೆ ಮಹಿಳಾ ಆಯೋಗ ಒತ್ತಾಯ

ಲೈಂಗಿಕ ದೌರ್ಜನ್ಯ: ಪರಮೇಶ್ವರ್ ರಾಜೀನಾಮೆಗೆ ಮಹಿಳಾ ಆಯೋಗ ಒತ್ತಾಯ
ಬೆಂಗಳೂರು , ಸೋಮವಾರ, 9 ಜನವರಿ 2017 (14:27 IST)
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತು ಬೇಜವಾಬ್ದಾರಿ ಹೇಳಿಕೆ ನೀಡಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಆದಷ್ಟು ಬೇಗ ಕ್ಷಮೆಯಾಚಿಸಲೇಬೇಕು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಸುಷ್ಮಾ ಸಾಹು ಆಗ್ರಹಿಸಿದ್ದಾರೆ.
ಡಿಸೆಂಬರ್ 31 ರ ರಾತ್ರಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಸುಷ್ಮಾ ಸಾಹು ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡು, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
 
ಬಳಿಕ ಸುದ್ದಿಗಾರರೊಂದುಗೆ ಮಾತನಾಡಿದ ಅವರು, ರಾಜಧಾನಿ ಬೆಂಗಳೂರಿನಲ್ಲಿ ನಡೆದ ಈ ಹೀನ ಕೃತ್ಯಗಳಿಂದ ನಿಜಕ್ಕೂ ಬೇಸರ ತಂದಿದೆ. ಇಂದರಿಂದಾಗಿ ಸಾಕಷ್ಟು ತಂದೆ-ತಾಯಂದಿರ ನಿದ್ದೆ ಹಾಳಾಗಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತು ಬೇಜವಾಬ್ದಾರಿ ಹೇಳಿಕೆ ನೀಡಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಆದಷ್ಟು ಬೇಗ ಕ್ಷಮೆಯಾಚಿಸಲೇಬೇಕು ಎಂದು ಒತ್ತಾಯಿಸಿದರು.
 
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಎಂಜಿ ರಸ್ತೆಯಲ್ಲಿ ನೆರೆದಿದ್ದ ಮಹಿಳೆಯರನ್ನು ಲೈಂಗಿಕವಾಗಿ ಹಿಂಸಿಸಿದ್ದರು. ಈ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಭದ್ರತೆಗೆಂದು ಸಾವಿರಾರು ಪೊಲೀಸರ ನಿಯೋಜನೆಗೊಂಡಿದ್ದರಾದರು ಕಿಡಿಗೇಡಿಗಳ ಮೇಲೆ ಕ್ರಮ ಜರುಗಿಸುವುದು ಸಾಧ್ಯವಾಗಿರಲಿಲ್ಲ. ಈ ಘಟನೆ ರಾಜ್ಯಾದ್ಯಂತ ಭಾರೀ ಸುದ್ದಿಯಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪಂಜಾಬ್, ಗೋವಾ ಚುನಾವಣೆಯನ್ನೆದುರಿಸಲು ನಯಾಪೈಸೆ ಇಲ್ಲ: ಕೇಜ್ರಿವಾಲ್