ಕೆಪಿಸಿಸಿ ಅಧ್ಯಕ್ಷರಾಗಿ ಜಿ ಪರಮೇಶ್ವರ್ ಅವರನ್ನು ಮುಂದಿನ ಅವಧಿಗೂ ಮುಂದುವರಿಸುವಂತೆ ಕಾಂಗ್ರೆಸ್ ಶಾಸಕರಾದ ಕೆ.ಎನ್.ರಾಜಣ್ಣ ಮತ್ತು ರಫೀಕ್ ಅಹ್ಮದ್ ಒತ್ತಾಯಿಸಿದ್ದಾರೆ.
ಪರಮೇಶ್ವರ್ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ, ಮುಂಬರುವ ಚುನಾವಣೆ ಸಿಎಂ ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಅವರ ನೇತೃತ್ವದಲ್ಲಿಯೇ ನಡೆಯಲಿ ಎಂದು ಮನವಿ ಮಾಡಿದ್ದಾರೆ.
ಸರಕಾರ ಮತ್ತು ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ಉಭಯ ನಾಯಕರು ಚುನಾವಣೆಯ ನೇತೃತ್ವವಹಿಸಿದಲ್ಲಿ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಸಂಸದ ಮುದ್ದಹನುಮೇಗೌಡ ತಿಳಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾಗಿ ಜಿ.ಪರಮೇಶ್ವರ್ ಅವರನ್ನು ಮುಂದುವರಿಸುವಂತೆ ಹೈಕಮಾಂಡ್ಗೆ ಮನವಿ ಮಾಡಲಾಗಿದೆ ಎಂದು ಮಧುಗಿರಿ ಕ್ಷೇತ್ರದ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.