ಗೃಹ ಸಚಿವ ಜಿ.ಪರಮೇಶ್ವರ್ ಸಲ್ಲಿಸಿದ್ದ ರಾಜೀನಾಮೆಯನ್ನು ಸಿಎಂ ಸಿದ್ದರಾಮಯ್ಯ ರಾಜ್ಯಪಾಲರಿಗೆ ರವಾನಿಸಿದ ಹಿನ್ನೆಲೆಯಲ್ಲಿ, ಮುಂದಿನ ಗೃಹ ಸಚಿವರು ಯಾರು ಎನ್ನುವ ಕುತೂಹಲ ಕೆರಳಿಸಿದೆ.
ಜಿ.ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ, ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿತ್ತು.
ಹೈಕಮಾಂಡ್ ಆದೇಶದ ಮೇರೆಗೆ ಗೃಹ ಸಚಿವ ಪರಮೇಶ್ವರ್ ರಾಜೀನಾಮೆ ನೀಡಿದ್ದರು. ಆದರೆ, ವಿಧಾನಸಭೆ ಅಧಿವೇಶನದ ಹಿನ್ನೆಲೆಯಲ್ಲಿ ಸಚಿವರ ರಾಜೀನಾಮೆಯನ್ನು ಸಿಎಂ ಸಿದ್ದರಾಮಯ್ಯ ರಾಜ್ಯಪಾಲರಿಗೆ ರವಾನಿಸಿರಲಿಲ್ಲ. ಇದೀಗ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ರವಾನಿಸಿದ್ದರಿಂದ ಮುಂದಿನ ಗೃಹ ಸಚಿವರು ಯಾರು ಎನ್ನುವುದು ಯಕ್ಷ ಪ್ರಶ್ನೆಯಾಗಿದೆ.
ನಗರಾಭಿವೃದ್ಧಿ ಸಚಿವರಾದ ಕೆ.ಜೆ.ಜಾರ್ಜ್ ಕೂಡಾ ಗೃಹ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗುತ್ತಿದೆ. ಇತರ ಹಿರಿಯ ನಾಯಕರು ಕೂಡಾ ಗೃಹ ಸಚಿವ ಸ್ಥಾನವನ್ನು ಅಲಂಕರಿಸಲು ಪ್ರಭಾವ ಬೀರುತ್ತಿದ್ದಾರೆ ಎನ್ನಲಾಗುತ್ತಿದೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ.
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.