ಮೈಸೂರು : ರಾಷ್ಟ್ರಕ್ಕೆ ಪ್ರಧಾನಿ ಮೋದಿ, ರಾಜ್ಯಕ್ಕೆ ಸಿಎಂ ಕುಮಾರಸ್ವಾಮಿ ಇದನ್ನ ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರು ಹೇಳಿದ್ದಾರೆ.
ಈ ಹಿಂದೆ ಪ್ರಧಾನಿ ಮೋದಿ ಹಾಗೂ ಬಿಜೆಪಿ ಪರ ಮಾತನಾಡಿದ ಸಚಿವ ಜಿ.ಟಿ.ದೇವೇಗೌಡರು ಇದೀಗ ಮತ್ತೆ ಮೋದಿ ಪರ ಬ್ಯಾಟ್ ಬೀಸಿದ್ದಾರೆ. ಅಲ್ಲದೇ 5 ವರ್ಷ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿರುತ್ತಾರೆ. ಮೈತ್ರಿ ಸರ್ಕಾರ ಸುಭದ್ರವಾಗಿದ್ದು, ಯಾವುದೇ ಅನುಮಾನ ಬೇಡ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಆಪರೇಷನ್ ಕಮಲ ಮಾಡುತ್ತಿದೆ ಎಂದ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಜಿ.ಟಿ.ದೇವೇಗೌಡರು, ಬಿಜೆಪಿ ಆಪರೇಷನ್ ಕಮಲ ಮಾಡುತ್ತಿಲ್ಲ. ಈ ಬಗ್ಗೆ ಎರಡು ಮಾತಿಲ್ಲ.. ಸರ್ಕಾರ ರಚನೆ ಬಳಿಕ ಆಪರೇಷನ್ ಕಮಲಕ್ಕೆ ಬಿಜೆಪಿ ಪ್ರಯತ್ನಿಸಿತ್ತು. ಆದರೆ ಮೋದಿ ಮತ್ತೆ ಪ್ರಧಾನಿಯಾದ ಮೇಲೆ ಅಪರೇಷನ್ ಕಮಲ ನಿಂತಿದೆ ಎಂದು ಹೇಳಿದ್ದಾರೆ.