Webdunia - Bharat's app for daily news and videos

Install App

ಗದಗ ಜಿಲ್ಲೆಯಲ್ಲಿ ಮಹಾಮಾರಿ ವೈರಸ್ ನಿಫಾ ವೈರಸ್ ಹರಡಿರುವ ಶಂಕೆ

Webdunia
ಗುರುವಾರ, 24 ಮೇ 2018 (18:23 IST)
ಮಾರಣಾಂತಿಕ ಮಹಾಮಾರಿ ಶಂಕಿತ ನೀಫಾ ವೈರಸ್ ಗದಗ ಜಿಲ್ಲೆಗೂ ಕಾಲಿಟ್ಟಿದೆ ಎನ್ನಲಾಗುತ್ತಿದೆ. ಗದಗ ಜಿಲ್ಲೆ ರೋಣ ತಾಲೂಕಿನ ವ್ಯಕ್ತಿಯೋರ್ವನಿಗೆ ನಿಫಾ ವೈರಸ್ ಇದೆ ಎಂದು ಶಂಕಿಸಲಾಗಿದೆ. 
ಸೋಂಕಿತ ವ್ಯಕ್ತಿಗೆ ಗದಗ ಜಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ವಿಶೇಷ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಈ ವ್ಯಕ್ತಿ ಕೆಲ ತಿಂಗಳ ಕಾಲ ಕೇರಳದ ಕ್ಯಾಲಿಕಟ್ ಸಮೀಪದಲ್ಲಿ ಕೆಲಸದಲ್ಲಿದ್ದರು. ಇತ್ತೀಚೆಗೆ ಗದಗ ಜಿಲ್ಲೆಯ ತವರೂರಿಗೆ ಮರಳಿದಾಗ ಕಳೆದ ಒಂದೆರಡು ವಾರಗಳಿಂದ ಜ್ವರ, ತಲೆನೋವು, ವಾಂತಿ, ಕೆಮ್ಮು, ಸುಸ್ತು ಹೀಗೆ ನಿಫಾ ವೈರಸ್‌ನ ಲಕ್ಷಣಗಳು ಈ ವ್ಯಕ್ತಿಗೆ ಗೋಚರವಾಗಿವೆ.
 
ಮುಂಜಾಗ್ರತಾ ಕ್ರಮವಾಗಿ ಗದಗ ಜಿಮ್ಸ್ ವೈದ್ಯರು ತಪಾಸಣೆಗೊಳಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಶಂಕಿತ ವ್ಯಕ್ತಿಯ ರಕ್ತದ ಮಾದರಿಯನ್ನು ಪುಣೆಯ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ರಕ್ತದ ಮಾದರಿ ಸಂಗ್ರಹಿಸಿ, ಪುಣೆಯ ಎನ್‌ಐವಿ ಲ್ಯಾಬ್‌ಗೆ ರಕ್ತ ಪರೀಕ್ಷೆಗಾಗಿ ರವಾನಿಸಿದ್ದಾರೆ.
 
 48 ಗಂಟೆಗಳಲ್ಲಿಪ್ರಯೋಗಾಲಯದ ವರದಿ ಬರಲಿದ್ದು, ಆನಂತರ ಹೆಚ್ಚಿನ ಚಿಕಿತ್ಸೆ ನೀಡುವುದಾಗಿ ಜಿಮ್ಸ್ ಆಡಳಿತ ವೈದ್ಯಾಧಿಕಾರಿ ಎ.ಬಿ ಪಾಟೀಲ್  ಮಾದ್ಯಮದವರಿಗೆ ಸ್ಪಷ್ಟನೆ ನೀಡಿದ್ದಾರೆ. ಗದಗ ಜಿಲ್ಲೆಯಲ್ಲೂ ನಿಫಾ ವೈರಸ್ ಭಯ ಕಾಡತೊಡಗಿದ್ದು, ಜಿಲ್ಲೆಯ ಜನರಲ್ಲಿ ಮತ್ತಷ್ಟು ಆತಂಕವನ್ನು ಮೂಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments