Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಗಣಪತಿ ಆತ್ಮಹತ್ಯೆ ಪ್ರಕರಣ: ನಿರೀಕ್ಷೆಯಂತೆ ಜಾರ್ಜ್, ಮೊಹಾಂತಿ, ಪ್ರಸಾದ್‌ಗೆ ಕ್ಲೀನ್ ಚಿಟ್

ಗಣಪತಿ ಆತ್ಮಹತ್ಯೆ ಪ್ರಕರಣ: ನಿರೀಕ್ಷೆಯಂತೆ ಜಾರ್ಜ್, ಮೊಹಾಂತಿ, ಪ್ರಸಾದ್‌ಗೆ ಕ್ಲೀನ್ ಚಿಟ್
ಬೆಂಗಳೂರು , ಶನಿವಾರ, 17 ಸೆಪ್ಟಂಬರ್ 2016 (14:37 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಐಪಿಎಸ್ ಅಧಿಕಾರಿಗಳಾದ ಪ್ರೊನಬ್ ಮೊಹಾಂತಿ ಹಾಗೂ ಎಂ.ಎಂ.ಪ್ರಸಾದ್ ಅವರಿಗೆ ಸಿಐಡಿ ಅಧಿಕಾರಿಗಳು ಬಿಗ್ ರಿಲೀಫ್ ನೀಡಿದ್ದಾರೆ. 
 
ಡಿವೈಎಸ್‌ಪಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಐಪಿಎಸ್ ಅಧಿಕಾರಿಗಳಾದ ಪ್ರೊನವ್ ಮೊಹಾಂತಿ ಹಾಗೂ ಎಂ.ಎಂ.ಪ್ರಸಾದ್ ಅವರ ಪಾತ್ರವಿರುವ ಕುರಿತು ಯಾವುದೇ ಸಾಕ್ಷಾಧಾರಗಳಿಲ್ಲ ಎಂದು ಮಡಿಕೇರಿ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. 
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆಗೆ ಶರಣಾಗುವ ಮುನ್ನ ಖಾಸಗಿ ಸುದ್ದಿ ವಾಹಿನಿಗೆ ಸಂದರ್ಶನ ನೀಡಿ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಪ್ರಣವ್ ಮೊಹಾಂತಿ ಮತ್ತು ಎಂ.ಎಂ.ಪ್ರಸಾದ್ ಅವರು ತನಗೆ ಕಿರುಕುಳ ನೀಡತ್ತಿದ್ದಾರೆ. ನನಗೇನಾದ್ರೂ ಆದ್ರೆ ಈ ಮೂವರೇ ಕಾರಣ ಎಂದು ಆರೋಪಿಸಿದ್ದರು.
 
ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಹಾಗೂ ಅಧಿಕಾರಿಗಳಾದ ಪ್ರೊನಬ್ ಮೊಹಾಂತಿ ಮತ್ತು ಎಂ.ಎಂ.ಪ್ರಸಾದ್ ವಿರುದ್ಧ ಎಫ್‌ಐಆರ್ ದಾಖಲಿಸಿ ಎಂದು ಮಡಿಕೇರಿ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಅನ್ನಪೂರ್ಣೆಶ್ವರಿ ಮಡಿಕೇರಿ ಟೌನ್ ಪೊಲೀಸರಿಗೆ ಸೂಚನೆ ನೀಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗಿಳಿಸಲು ಗೃಹ ಸಚಿವರ ಸಂಚು: ಸಿ.ಟಿ.ರವಿ