ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಹಮ್ಮಿಕೊಂಡ ಸ್ತಬ್ದ ಚಿತ್ರವನ್ನು ಗಣ್ಯರು ಹಾಗೂ ಅಧಿಕಾರಿಗಳು ಸ್ವಾಗತಿಸಿದರು.
ಕಲಬುರಗಿ ಜಿಲ್ಲೆಯ ಜೇವರ್ಗಿ ನಗರಕ್ಕೆ ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಹಮ್ಮಿಕೊಂಡ ಸ್ತಬ್ದ ಚಿತ್ರ ಬಂದಿದ್ದು, ಜೇವರ್ಗಿಯಲ್ಲಿ ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಶಿವರಾಜ ಪಾಟೀಲ ಕೋಲ್ಕೂರ, ಮಾಜಿ ಶಾಸಕ ದೊಡ್ಡಪ್ಪ ಗೌಡ ಪಾಟೀಲ ನರಿಬೋಳ ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು.
ಗಾಂಧೀಜಿ ಅವರ ಜೀವನದ ವಿವಿಧ ಘಟನಾವಳಿಗಳು, ಸ್ವಾತಂತ್ರ್ಯ ಹೋರಾಟದ ಪ್ರತಿಕೃತಿಗಳಿಂದ ಸ್ತಬ್ದ ಚಿತ್ರವು ಗಮನ ಸೆಳೆಯಿತು. ಗಾಂಧೀಜಿಗೆ ಇಷ್ಟವಾಗಿದ್ದ ಗೀತೆಗಳ ಹಿನ್ನೆಲೆ ಗಾಯನ, ಸತ್ಯ, ಅಂಹಿಸೆಯ, ಭ್ರಾತೃತ್ವ, ಸಾಮರಸ್ಯದ ಸಂದೇಶಗಳು ಹಾಗೂ ಗಾಂಧೀಜಿ ಭಾಷಣದ ಧ್ವನಿಸುರುಳಿಗಳು ಇಂಪು ನೀಡಿದವು.