Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರಿನ ಹಲವೆಡೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಜೆಜೆ ನಗರ ಪೊಲೀಸರು ಬಂಧಿಸಿದ್ದಾರೆ. ಮನ್ಸೂರ್ ಹಾಗೂ ಶೊಯಾಬ್ ಉಲ್ಲಾ ಶರೀಫ್ ಬಂಧಿತ ಆರೋಪಿಗಳಾಗಿದ್ದು, ಆರೋಪಿಗಳು ಬೈಕ್ನಲ್ಲಿ ಬೆಂಗಳೂರಿನ ಪ್ರಮುಖ ಭಾಗಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಜೆಜೆ ನಗರ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಮೊದಲ ಆರೋಪಿ ನೀಡಿದ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿ 32ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ವಿರುದ್ಧ ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.