ಹಿರಿಯ ಸಂಶೋಧಕ ಎಂ.ಎಂ.ಕಲಬುರಗಿ ಹತ್ಯೆಯಾಗಿ ವರ್ಷಗಳೇ ಕಳೆದರೂ ಆರೋಪಿಗಳ ಪತ್ತೆಯಾಗಿಲ್ಲ. ಅದರಂತೆ, ಗೌರಿ ಲಂಕೇಶ್ ಕೇಸ್ ಕೂಡಾ ಹಳ್ಳಹಿಡಿಬಾರ್ದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವ ರಾಮಲಿಂಗಾರೆಡ್ಡಿ ಪ್ರಕರಣದ ಬಗ್ಗೆ ಹೇಳಿಕೆ ನೀಡಲು ಮಾತ್ರ ಸೀಮಿತರಾಗಿದ್ದಾರೆ. ಕೆಂಪಯ್ಯ ಎಸ್‌ಐಟಿ ರಚಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ತನಿಖೆ ಮಾಡಿಸುತ್ತಿದ್ದಾರೆ. ರಾಮಲಿಂಗಾರೆಡ್ಡಿ ಆತ್ಮ ಮುಟ್ಟಿಕೊಂಡು ಎಸ್‌ಐಟಿ ಕೆಂಪಯ್ಯ ರಚಿಸಿಲ್ಲ ಎಂದು ಹೇಳಲಿ ಬಹಿರಂಗ ಸವಾಲ್ ಹಾಕಿದರು.
ಗೌರಿ ಲಂಕೇಶ್ ಹತ್ಯೆಯಲ್ಲಿ ಇಲ್ಲಿಯವರೆಗೆ ಯಾವುದೇ ಸುಳಿವು ದೊರೆತಿಲ್ಲ. ಆದಷ್ಟು ಬೇಗನೆ ಆರೋಪಿಗಳನ್ನು ಹಿಡಿದಲ್ಲಿ ಗೌರಿ ಲಂಕೇಶ್ ಅವರಿಗೆ ನ್ಯಾಯ ದೊರಕಿಸಿಕೊಟ್ಟಂತಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಗೃಹ ಸಚಿವ ರಾಮಲಿಂಗಾರೆಡ್ಡಿ, ಗೃಹ ಸಚಿವರ ಸಲಹಗಾರ ಕೆಂಪಯ್ಯ ಮತ್ತು ಸಿಎಂ ಸಿದ್ದರಾಮಯ್ಯ ನಡುವಿನ ಭಿನ್ನಾಭಿಪ್ರಾಯಗಳಿಂದ ಪ್ರಕರಣದ ತನಿಖೆ ವಿಳಂಬವಾಗಬಾರದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.