ಬೆಂಗಳೂರು: ರಾಹುಲ್ ಗಾಂಧಿ ಮೊನ್ನೆಯಷ್ಟೇ ಪಾರ್ವತಮ್ಮ ರಾಜ್ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಲು ಡಾ. ರಾಜ್ ನಿವಾಸಕ್ಕೆ ಬಂದ ಬೆನ್ನಲ್ಲೇ ಶಿವರಾಜ್ ಕುಮಾರ್ ಪತ್ನಿ ಗೀತಾ ಚುನಾವಣೆಗೆ ಸ್ಪರ್ಧಿಸುತ್ತಾರೆಂಬ ಸುದ್ದಿ ಹಬ್ಬಿದೆ.
ಮುಂಬರುವ ಚುನಾವಣೆಗೆ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ನಿಂದ ಕಣಕ್ಕಿಳಿಯಲಿದ್ದಾರೆ ಎಂದು ಗಾಸಿಪ್ ಹರಡಿದೆ. ಆದರೆ ಇದರ ಸತ್ಯಾಸತ್ಯತೆ ತಿಳಿದಿಲ್ಲ. ಅಂತೂ ಗಾಳಿ ಸುದ್ದಿ ಹಬ್ಬಿದೆ.
ಆದರೆ ರಾಹುಲ್ ಭೇಟಿ ಹಿಂದೆ ಯಾವುದೇ ರಾಜಕೀಯ ಉದ್ದೇಶವಿರಲಿಲ್ಲ ಎಂದು ಕುಟುಂಬ ವರ್ಗ ಸ್ಪಷ್ಟಪಡಿಸಿತ್ತು. ಮಾಜಿ ಸಿಎಂ ದಿವಂಗತ ಬಂಗಾರಪ್ಪನವರ ಪುತ್ರಿಯೂ ಆಗಿರುವ ಗೀತಾ ಹಿಂದೊಮ್ಮೆ ಜೆಡಿಎಸ್ ನಿಂದ ಕಣಕ್ಕಿಳಿದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಸ್ಪರ್ಧಿಸಿ ಸೋತಿದ್ದರು.