ಪೊಲೀಸ್ ಅಧಿಕಾರಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಾಜಿ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಸಿಐಡಿ ತನಿಖಾ ತಂಡಸ ಕ್ಲೀನ್ ಚಿಟ್ ನೀಡಿದ್ದರಿಂದ ಅವರನ್ನು ಮರಳಿ ಸಂಪುಟಕ್ಕೆ ಸೇರಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಒಂದು ತಿಂಗಳು ಅಥವಾ ಒಂದು ವಾರದೊಳಗೆ ಜಾರ್ಜ್ ಮತ್ತೆ ಸಚಿವ ಸಂಪುಟ ಸೇರಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಸಚಿವ ಸಂಪುಟಕ್ಕೆ ಸೇರ್ಪಡೆಯಾಗುವ ಕುರಿತಂತೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಜಾರ್ಜ್, ಯಾರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎನ್ನುವುದು ಮುಖ್ಯಮಂತ್ರಿಯವ ನಿರ್ಧಾರಕ್ಕೆ ಬಿಟ್ಟಿದ್ದು ಎಂದು ತಿಳಿಸಿದ್ದಾರೆ.
ಡಿವೈಎಸ್ಪಿ ಎಂ.ಕೆ.ಗಣಪತಿ ಹತ್ಯೆಯಲ್ಲಿ ಮಾಜಿ ಸಚಿವ ಜಾರ್ಜ್ ಅವರ ಕೈವಾಡವಿಲ್ಲ ಎಂದು ಸಿಐಡಿ ತನಿಖಾ ತಂಡ ಕೊಡಗು ಜಿಲ್ಲೆಯ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ ಹಿನ್ನೆಲೆಯಲ್ಲಿ ಜಾರ್ಜ್ ಮತ್ತೆ ಸಚಿವ ಸಂಪುಟ ಸೇರುವುದು ಬಹುತೇಕ ಖಚಿತವಾಗಿದೆ.
ಕಳೆದ ಜುಲೈ ತಿಂಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಂಸತ್ತಿನಲ್ಲಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ತ್ತಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಾರ್ಜ್ ಅವರ ಸಚಿವ ಸ್ಥಾನದಿಂದ ಕೆಳಗಿಳಿಸಿ ತನಿಖೆಗೆ ಆದೇಶಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ