ಕೇಂದ್ರ ಸಚಿವೆ ನಿರ್ಮಲಾ ಸಿತಾರಾಮನ್ ಅವರಿಗೆ ಘೇರಾವ್ ಹಾಕಿ ಪ್ರತಿಭಟನೆ ನಡೆಸಲಾಗಿದೆ.
ಭಾರೀ ಪ್ರಮಾಣದ ನೆರೆ ಹಾವಳಿಯಿಂದ ರಾಜ್ಯದ 22 ಜಿಲ್ಲೆಗಳಲ್ಲಿ ಜಲ ಪ್ರವಾಹ ಬಂದು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜನರ ಬದುಕು ತತ್ತರಿಸಿ ಹೋಗಿದ್ದು, ಈ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಬಿಡಿಕಾಸು ಪರಿಹಾರ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಕೇಂದ್ರ ಸಚಿವೆ ನಿರ್ಮಲಾ ಸಿತಾರಾಮನ್ ಅವರಿಗೆ ಘೇರಾವ್ ಹಾಕಿ ಪ್ರತಿಭಟನೆ ಮಾಡಲು ಮುಂದಾದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಕೇಂದ್ರ ಸರ್ಕಾರ ನೆರೆ ಪರಿಹಾರ ಕೊಡುವಂತೆ ರಾಜ್ಯ ಸರ್ಕಾರ 38 ಸಾವಿರ ಕೋಟಿ ರೂ. ಪರಿಹಾರ ಕೇಳಿತ್ತು. ಆದರೆ ಕೇಂದ್ರ ಸರ್ಕಾರ ಕೇವಲ 1200 ಕೋಟಿ ಮಾತ್ರ ಪರಿಹಾರ ಬಿಡುಗಡೆ ಮಾಡಿದ್ದನ್ನು ವಿರೋಧಿಸಲಾಯಿತು.
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆಗಮಿಸುತ್ತಿದ್ದ ವೇಳೆ ಸಚಿವರ ವಿರುದ್ಧ ವಿಮಾನ ನಿಲ್ದಾಣದ ಹೊರಗಡೆ ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದೀಪಾ ಗೌರಿ ನೇತೃತ್ವದಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರ ಪ್ರತಿಭಟನೆಯ ಮಾಡಿದ್ರು. ಪ್ರತಿಭಟನೆಗೆ ಮುಂದಾದ ಕಾರ್ಯಕರ್ತರನ್ನು ಗೋಕುಲ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದ್ರು.