Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಗಿರೀಶ್ ಕಾರ್ನಾಡ್ ಇನ್ನಿಲ್ಲ

ಗಿರೀಶ್ ಕಾರ್ನಾಡ್ ಇನ್ನಿಲ್ಲ
ಬೆಂಗಳೂರು , ಸೋಮವಾರ, 10 ಜೂನ್ 2019 (10:53 IST)
ಬೆಂಗಳೂರು : ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ, ನಟ, ನಿರ್ದೇಶಕ ಗಿರೀಶ್ ಕಾರ್ನಾಡ್ ಅವರು ಇಂದು ನಿಧನರಾಗಿದ್ದಾರೆ.



ಇವರಿಗೆ 81 ವರ್ಷ ವಯಸ್ಸಾಗಿದ್ದು, ಕಳೆದ 1 ತಿಂಗಳಿನಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಇವರು ಬೆಂಗಳೂರಿನ ಲ್ಯಾವೆಲ್ಲಾ ರಸ್ತೆಯ ತಮ್ಮ ನಿವಾಸದಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.

 

ರಘುನಾಥ್ ಮತ್ತು ಕೃಷ್ಣಾಬಾಯಿ ದಂಪತಿಗಳ ಮಗನಾದ ಗಿರೀಶ್ ಕಾರ್ನಾಡ್ ಅವರು 1938ರ ಮೇ 19 ರಂದು ಮಹಾರಾಷ್ಟ್ರದ ಮಾಥೆರನ್ ನಲ್ಲಿ ಜನಿಸಿದ್ದಾರೆ. ಸಾಹಿತಿ, ನಟ, ನಿರ್ದೇಶಕರಾಗಿ ಗುರುತಿಸಿಕೊಂಡ ಅವರು ಅನೇಕ ಕನ್ನಡ, ಹಿಂದಿ ಚಿತ್ರಗಳಲ್ಲೂ ನಟಿಸಿದ್ದರು. 'ಸಂಸ್ಕಾರ', 'ನಾಗಮಂಡಲ', 'ತಬ್ಬಲಿಯು ನೀನಾದೆ ಮಗನೆ', 'ಒಂದಾನೊಂದು ಕಾಲದಲ್ಲಿ', 'ಚೆಲುವಿ', 'ಕಾನೂರು ಹೆಗ್ಗಡತಿ' ಮುಂತಾದ ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ. ಹಿಂದಿ ಚಿತ್ರಗಳಾದ 'ನಿಶಾಂತ್', 'ಮಂಥನ್', 'ಪುಕಾರ್', ಇತ್ತೀಚಿನ 'ಏಕ್ ಥಾ ಟೈಗರ್', 'ಟೈಗರ್ ಜಿಂದಾ ಹೈ' ಮುಂತಾದ ಚಿತ್ರಗಳಲ್ಲಿ ತನ್ನ ಪ್ರಭುದ್ದ ನಟನೆಯಿಂದ ಮನೆಮಾತಾಗಿದ್ದರು.

 

ಗಿರೀಶ್ ಕಾರ್ನಾಡರು ತಮ್ಮ ಸಾಹಿತ್ಯ ಕೃಷಿ ಮತ್ತು ಚಲನ ಚಿತ್ರಗಳಿಗಾಗಿ ಪದ್ಮಶ್ರೀ, ಪದ್ಮಭೂಷಣ, ಜ್ಞಾನಪೀಠ ಪ್ರಶಸ್ತಿ, ಸಂಗೀತ ನಾಟಕ ಅಕಾಡಮಿ ಪ್ರಶಸ್ತಿ, ಚಿತ್ರ ನಟನೆ ಮತ್ತು ನಿರ್ದೇಶನಕ್ಕಾಗಿ ರಾಷ್ಟ್ರ ಪ್ರಶಸ್ತಿ, ಫಿಲಂ ಫೇರ್ ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದರೆ.

 

 

 

 

 


Share this Story:

Follow Webdunia kannada

ಮುಂದಿನ ಸುದ್ದಿ

ತಿರುಪತಿಯಲ್ಲಿ ಪ್ರಧಾನಿ ಮೋದಿ (ಫೋಟೋ ಗ್ಯಾಲರಿ)