Webdunia - Bharat's app for daily news and videos

Install App

ರೇಣುಕಸ್ವಾಮಿ ಹತ್ಯೆ ಪ್ರಕರಣ, ತನಿಖಾ ತಂಡಕ್ಕೆ ಮತ್ತೇ ಗಿರೀಶ್‌ ನಾಯ್ಕ್‌ ಸೇರ್ಪಡೆ

sampriya
ಭಾನುವಾರ, 16 ಜೂನ್ 2024 (09:50 IST)
ಬೆಂಗಳೂರು: ನಟ ದರ್ಶನ್‌, ಪವಿತ್ರ ಗೌಡ ಸೇರಿದಂತೆ 16 ಮಂದಿ ಆರೋಪಿಗಳ  ಎಸಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖಾಧಿಕಾರಿಗಳ ತಂಡಕ್ಕೆ ಮತ್ತೆ ಇನ್ಸ್‌ಸ್ಪೆಕ್ಟರ್‌ ಗಿರೀಶ್‌ ನಾಯ್ಕ್‌ ಅವರು ಸೇರ್ಪಡೆಗೊಂಡಿದ್ದಾರೆ.

ಗಿರೀಶ್ ನಾಯ್ಕ್ ಮೊದಲಿಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಚುನಾವಣೆ ನಿಮಿತ್ತ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಗಿರೀಶ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಇದೀಗ ಮತ್ತೇ ಅವರನ್ನು ತನಿಖಾಧಿಕಾರಿಗಳ ತಂಡಕ್ಕೆ ಸೇರ್ಪಡಿಸಲಾಗಿದೆ.

ಇನ್ಸ್‌ಪೆಕ್ಟರ್ ಗಿರೀಶ್ ನಾಯ್ಕ್ ಹಾಗೂ ಎಸಿಪಿ ಚಂದನ್ ಆರೋಪಿ ದರ್ಶನ್‌ನನ್ನು ಮೈಸೂರಿನಿಂದ ಕರೆತಂದಿದ್ದರು.

ಇದೇ ವೇಳೆ ದರ್ಶನ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಮರ್ಡರ್ ನಡೆದಿದೆ. ನಂತರ ಮತ್ತೆ ಗಿರೀಶ್ ನಾಯ್ಕ್ ಸಿ.ಕೆ ಅಚ್ಚುಕಟ್ಟು ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಆ ಬಳಿಕ ಎಸಿಪಿ ಚಂದನ್ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿತ್ತು. ಆರೋಪಿಗಳ ಹೆಚ್ಚಿನ ವಿಚಾರಣೆ ಅಗತ್ಯತೆ ಹಿನ್ನೆಲೆ ಮತ್ತೆ ಗಿರೀಶ್ ನಾಯ್ಕ್ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಇನ್ನೂ ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣ ಸಂಬಂಧ ಎ1 ಆರೋಪಿಯಾಗಿ ಪವಿತ್ರಾ ಗೌಡ, ಎ 2 ಆರೋಪಿಯಾಘಿ ನಟ ದರ್ಶನ್‌ ಸೇರಿದಂತೆ 16 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

ಕೊಲೆ ಆರೋಪ ಎದುರಿಸುತ್ತಿರುವವರ ಪೈಕಿ 12 ಆರೋಪಿಗಳನ್ನು 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ಶನಿವಾರ ನ್ಯಾಯಾಲಯ ಆದೇಶ ಹೊರಡಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments