ಡಿವೈಎಸ್‌ಪಿ ಎಂ.ಕೆ. ಗಣಪತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಮ್ಮ ಬಳಿ ದಾಖಲೆ ಇದ್ರೆ ಸಿಬಿಐಗೆ ಕೊಡಿ ಎಂದು ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಅಧಿವೇಶನದಲ್ಲಿ ಮಾತನಾಡಿದ ಅವರು ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಬಳಿ ಸುಪ್ರೀಂಕೋರ್ಟ್ ಆದೇಶದ ಪ್ರತಿ ಇಲ್ಲ. ಬೇಕಾದ್ರೆ ನಾನೇ ಆದೇಶದ ಪ್ರತಿಯನ್ನು ಕಳುಹಿಸಿಕೊಡುತ್ತೇನೆ ಎಂದು ಟಾಂಗ್ ನೀಡಿದರು.
ಸಿಬಿಐ ತನಿಖೆಗೆ ರಾಜ್ಯ ಸರಕಾರ ಸಂಪೂರ್ಣ ಸಹಕಾರ ನೀಡಲಿದೆ. ಸಿಬಿಐ ತನಿಖೆಯಲ್ಲಿ ರಾಜ್ಯ ಸರಕಾರ ಹಸ್ತಕ್ಷೇಪ ಮಾಡಲು ಸಾಧ್ಯವಾಗದು. ನಿಷ್ಪಕ್ಷಪಾತ ತನಿಖೆ ನಡೆಸಿ ವರದಿ ಸಲ್ಲಿಸಲಿ. ವರದಿ ಬಂದ ನಂತರ ನಾನು ಹೇಳಿಕೆ ನೀಡುತ್ತೇನೆ ಎಂದು ಸವಾಲ್ ಹಾಕಿದರು.
ಡಿವೈಎಸ್‌ಪಿ ಎಂ.ಕೆ.ಗಣಪತಿ ಹತ್ಯೆಯ ಬಗ್ಗೆ ತನಿಖೆ ನಡೆಸಿ ಮೂರು ತಿಂಗಳಲ್ಲಿ ಪ್ರಾಥಮಿಕ ವಹದಿ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.