Webdunia - Bharat's app for daily news and videos

Install App

ದೀಪಾವಳಿ ಹಬ್ಬಕ್ಕೆ ಆಭರಣ ಕೊಳ್ಳುವುದಾದರೆ ಚಿನ್ನ, ಬೆಳ್ಳಿ ದರ ವಿವರ ಪರಿಶೀಲಿಸಿ

Webdunia
ಮಂಗಳವಾರ, 2 ನವೆಂಬರ್ 2021 (20:15 IST)
ನೀವು ಕೂಡಿಟ್ಟ ಹಣದಲ್ಲಿನ ನೀವು ಅಂದುಕೊಂಡಿರುವ ಆಭರಣವನ್ನು ಖರೀದಿಸಬಹುದು ಅನಿಸಿದರೆ ಆ ಕುರಿತಾಗಿ ಯೋಚಿಸಿ.
 
ಬೆಂಗಳೂರು: ದೀಪಾವಳಿ ಹಬ್ಬ ಇನ್ನೇನು ಎದುರಿಗಿದೆ. ಹಬ್ಬದ ವಿಶೇಷದ ಪ್ರಯುಕ್ತ ಚಿನ್ನಾಭರಣ ಖರೀದಿಸಬೇಕು ಅಂದುಕೊಂಡಿದ್ದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟಿದೆ ಎಂಬ ವಿವರವನ್ನು ಗಮನಿಸಿ.
 
ನೀವು ಕೂಡಿಟ್ಟ ಹಣದಲ್ಲಿನ ನೀವು ಅಂದುಕೊಂಡಿರುವ ಆಭರಣವನ್ನು ಖರೀದಿಸಬಹುದು ಅನಿಸಿದರೆ ಆ ಕುರಿತಾಗಿ ಯೋಚಿಸಿ. ನಿನ್ನೆಯೂ ಸಹ ಬೆಂಗಳೂರಿನಲ್ಲಿ ಚಿನ್ನದ ದರ ಸ್ಥಿರವಾಗಿತ್ತು. ಇಂದು ಮಂಗಳವಾರ (ನವೆಂಬರ್ 2) ಚಿನ್ನದ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಆದರೆ ಬೆಳ್ಳಿ ದರ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಳಿಕೆ ಆಗಿದೆ.
 
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಚಿನ್ನದ ದರ ಸ್ಥಿರವಾಗಿದೆ. ಅದಕ್ಕೂ ಮೊದಲು ಇಳಿಕೆ ಕಂಡಿತ್ತು. ಆ ಬಳಿಕ ಇಂದು 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,700 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,770 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,87,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಕೆ ಕಂಡು ಬಂದಿಲ್ಲ. ಬೆಳ್ಳಿ ಬೆಲೆಯಲ್ಲಿ ಇಂದು ಇಳಿಕೆ ಆಗಿದ್ದು, ಕೆಜಿ ಬೆಳ್ಳಿ ಬೆಲೆ 64,400 ರೂಪಾಯಿ ದಾಖಲಾಗಿದೆ. ಸುಮಾರು 200 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.
 
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ಬೆಲೆ
 
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,010 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 500 ರೂಪಾಯಿ ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,110 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,100 ರೂಪಾಯಿ ದಾಖಲಾಗಿದೆ. ಸುಮಾರು 500 ರೂಪಾಯಿಯಷ್ಟು ಇಳಿಕೆ ಆಗಿದೆ. ಅದೇ ರೀತಿ ಬೆಳ್ಳಿ ಬೆಲೆಯಲ್ಲಿಯೂ ಇಳಿಕೆ ಆಗಿದ್ದು, ಕೆಜಿ ಬೆಳ್ಳಿ ಬೆಲೆ 68,700 ರೂಪಾಯಿ ನಿಗದಿಯಾಗಿದೆ. ಸುಮಾರು 200 ರೂಪಾಯಿ ಇಳಿಕೆ ಕಂಡು ಬಂದಿದೆ.
 
ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ
 
ಹೈದಾರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾ ಚಿನ್ನಕ್ಕೆ 44,700 ರೂಪಾಯಿ ಹಾಗೂ 100 ಗ್ರಾ ಚಿನ್ನಕ್ಕೆ 4,47,700 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾ ಚಿನ್ನಕ್ಕೆ 48,770 ರೂಪಾಯಿ ಹಾಗೂ 4,87,700 ರೂಪಾಯಿ ದಾಖಲಾಗಿದೆ. ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದ್ದು ಕೆಜಿ ಬೆಳ್ಳಿಗೆ 68,700 ರೂಪಾಯಿ ನಿಗದಿಯಾಗಿದೆ. ಸುಮಾರು 200 ರೂಪಾಯಿ ಇಳಿಕೆ ಆಗಿದೆ.
 
ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ
ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,740 ರೂಪಾಯಿ ಹಾಗೂ 100 ಗ್ರಾ ಚಿನ್ನಕ್ಕೆ 4,67,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿಕೆ ಕಂಡು ಬಂದಿಲ್ಲ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,740 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,77,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಬೆಳ್ಳಿ ಬೆಲೆಯಲ್ಲಿ ಇಳಿಕೆ ಆಗಿದ್ದು, 200 ರೂಪಾಯಿ ಇಳಿಕೆ ಬಳಿಕ ಕೆಜಿ ಬೆಳ್ಳಿಗೆ 64,400 ರೂಪಾಯಿ ನಿಗದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments