Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಬೆಂಗಳೂರು, ಮುಂಬೈ ಸೇರಿದಂತೆ ಅನೇಕ ನಗರಗಳಲ್ಲಿ ಚಿನ್ನದ ಬೆಲೆ ಗಗನಕ್ಕೇರಿತ್ತು. ಆದರೆ, 3 ದಿನಗಳಿಂದ ಭಾರತದಲ್ಲಿ ಚಿನ್ನದ ಬೆಲೆ ಮತ್ತೆ ಇಳಿಮುಖವಾಗಿದೆ. ಇಂದು ಕೂಡ 10 ಗ್ರಾಂ ಚಿನ್ನಕ್ಕೆ 540 ರೂ. ಕುಸಿತವಾಗಿದೆ. ಭಾರತದಲ್ಲಿ ಬೆಳ್ಳಿಯ ಬೆಲೆ ಕೂಡ (Silver Price) ನಿನ್ನೆಗಿಂತಲೂ ಇಂದು 1,000ರೂ. ಇಳಿಕೆ ಕಂಡಿದೆ. ನೀವೇನಾದರೂ ಬಂಗಾರ ಖರೀದಿಸುವವರಾದರೆ ನಿಮಗಿದು ಶುಭ ಸುದ್ದಿ. ಹಾಗಾದರೆ, ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.
ಭಾರತದ ಅನೇಕ ನಗರಗಳಲ್ಲಿ 3 ದಿನಗಳಿಂದ ಚಿನ್ನದ ಬೆಲೆ ಕುಸಿತವಾಗಿದೆ. ನಿನ್ನೆ ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 48,100 ರೂ. ಇದ್ದುದು ಇಂದು 47,600 ರೂ.ಗೆ ಕುಸಿತ ಕಂಡಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,470 ರೂ. ಇದ್ದುದು 51,930 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.
ಗುಡ್ ರಿಟರ್ನ್ಸ್ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,190 ರೂ. ಮುಂಬೈ- 47,600 ರೂ, ದೆಹಲಿ- 47,600 ರೂ, ಕೊಲ್ಕತ್ತಾ- 47,600 ರೂ, ಬೆಂಗಳೂರು- 47,600 ರೂ, ಹೈದರಾಬಾದ್- 47,600 ರೂ, ಕೇರಳ- 47,600 ರೂ, ಪುಣೆ- 47,680 ರೂ, ಮಂಗಳೂರು- 47,600 ರೂ, ಮೈಸೂರು- 47,600 ರೂ. ಇದೆ.
ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:
ಚೆನ್ನೈ- 52,570 ರೂ, ಮುಂಬೈ- 51,930 ರೂ, ದೆಹಲಿ- 51,930 ರೂ, ಕೊಲ್ಕತ್ತಾ- 51,930 ರೂ, ಬೆಂಗಳೂರು- 51,930 ರೂ, ಹೈದರಾಬಾದ್- 51,930 ರೂ, ಕೇರಳ- 51,930 ರೂ, ಪುಣೆ- 52,010 ರೂ, ಮಂಗಳೂರು- 51,930 ರೂ, ಮೈಸೂರು- 51,930 ರೂ. ಇದೆ.
ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಚಿನ್ನದ ಬೆಲೆ ಏರಿಕೆಯಾಗುತ್ತಿದ್ದರೆ ಬೆಳ್ಳಿ ಬೆಲೆ (Silver Price) ಇಳಿಮುಖವಾಗಿದೆ.
ಇಂದಿನ ಬೆಳ್ಳಿಯ ದರ:
ಇದೇ ಮೊದಲ ಬಾರಿಗೆ ಒಂದೇ ದಿನದಲ್ಲಿ ಬೆಳ್ಳಿ ಬೆಲೆ ಬರೋಬ್ಬರಿ 1,000 ರೂ. ಕುಸಿತ ಕಂಡಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿಯ ದರ 70,000 ರೂ. ಇದ್ದುದು 69,000 ರೂ. ಆಗಿದೆ. ದಾಖಲೆಯ ಮಟ್ಟಕ್ಕೇರಿದ್ದ ಬೆಳ್ಳಿ ಬೆಲೆ ಒಂದೇ ದಿನದಲ್ಲಿ ಭಾರೀ ಕುಸಿತ ಕಂಡಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 72,800 ರೂ, ಮೈಸೂರು- 72,800 ರೂ., ಮಂಗಳೂರು- 72,800 ರೂ., ಮುಂಬೈ- 69,000 ರೂ, ಚೆನ್ನೈ- 72,800 ರೂ, ದೆಹಲಿ- 69,000 ರೂ, ಹೈದರಾಬಾದ್- 72,800 ರೂ, ಕೊಲ್ಕತ್ತಾ- 69,000 ರೂ. ಇದೆ.