ಶಾಲೆಗಳ ಮಕ್ಕಳಿಗೆ ಶಿಕ್ಷಣ ಸಚಿವರು ಗುಡ್ ನ್ಯೂಸ್ ಕೊಟ್ಟಿದ್ದಾರೆ.
ವಾರಕ್ಕೆ ಒಂದು ದಿನ ಶಾಲೆಗಳಲ್ಲಿ ಬ್ಯಾಗ್ ರಹಿತ ದಿನವನ್ನಾಗಿ ಮಾಡಲಾಗುತ್ತಿದೆ. ಹೀಗಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ರಾಜ್ಯ ಸರಕಾರವು ಮುಂಬರುವ ಶೈಕ್ಷಣಿಕ ವರ್ಷದಿಂದ ವಾರದಲ್ಲಿ ಒಂದ ದಿನ ಬ್ಯಾಗ್ ರಹಿತ ದಿನವನ್ನಾಗಿ ಜಾರಿಗೆ ತರಲು ಸಿದ್ಧತೆ ನಡೆಸುತ್ತಿದೆ ಅಂತ ತಿಳಿಸಿದ್ದಾರೆ.
ಪಠ್ಯೇತರ ಚಟುವಟಿಕೆ, ಕ್ರೀಡೆಗಳಲ್ಲಿ ಮಕ್ಕಳು ಹೆಚ್ಚಾಗಿ ಪಾಲ್ಗೊಳ್ಳಬೇಕು. ಈ ಉದ್ದೇಶದಿಂದ ಬ್ಯಾಗ್ ರಹಿತ ದಿನ ಜಾರಿಗೆ ತರ್ತೇವೆ ಅಂತ ಹೇಳಿದ್ದಾರೆ.