ನವದೆಹಲಿ : ಸಬ್ಸಿಡಿರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ 100 ರೂ. ಇಳಿಕೆ ಮಾಡುವುದರ ಮೂಲಕ ಕೇಂದ್ರ ಸರ್ಕಾರ ಗ್ರಾಹಕರಿಗೆ ಸಿಹಿಸುದ್ಧಿ ನೀಡಿದೆ.
ಭಾನುವಾರ ಮಧ್ಯರಾತ್ರಿಯಿಂದ ಸಬ್ಸಿಡಿರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆ 737.50ರೂ. ಯಿಂದ 637ಕ್ಕೆ ಇಳಿಕೆಯಾಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಶನ್ (ಐಒಸಿ) ತಿಳಿಸಿದೆ. ಇನ್ನು ಸಬ್ಸಿಡಿ ಸಹಿತ ಸಿಲಿಂಡರ್ ಗಳ ಬೆಲೆಯನ್ನು ಯಥಾ ಸ್ಥಿತಿಯಲ್ಲಿ ಮುಂದುವರೆಸಲಾಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರಗಳು ಇಳಿಕೆಯಾಗಿರುವ ಕಾರಣ ಭಾರತೀಯ ಮಾರುಕಟ್ಟೆಯಲ್ಲೂ ಎಲ್ ಪಿಜಿ ದರದಲ್ಲಿ ಇಳಿಕೆ ಮಾಡಲಾಗಿದೆ ಎಂದು ಐಒಸಿ ತಿಳಿಸಿದೆ.